ಮಂಗಳೂರು : ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್‌ಸಿಡಿಸಿಸಿ ಬ್ಯಾಂಕ್) 2024-25ನೇ ಸಾಲಿನಲ್ಲೂ ಪ್ರಶಸ್ತಿಗೆ ಪಾತ್ರವಾಗಿದೆ.
ಚೆನ್ನೈಯಲ್ಲಿ ಇತ್ತೀಚೆಗೆ ನಡೆದ ಎಪಿವೈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಉಪಮಹಾಪ್ರಬಂಧಕ ನಿತ್ಯಾನಂದ ಶೇರಿಗಾರ್ ಅವರು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥ ಡಾ.ದೀಪಕ್ ಮೊಹಾಂತಿ ಅವರಿಂದ
ಪ್ರಶಸ್ತಿ ಸ್ವೀಕರಿಸಿದರು. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ್ವರಲು, ಮುಖ್ಯ ಮಹಾಪ್ರಬಂಧಕ ಪ್ರವೇಶ್ ಕುಮಾರ್ ಉಪಸ್ಥಿತರಿದ್ದರು.