ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2023-24ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. 
ಜಿಲ್ಲೆ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿಗೆ ಎಸ್‌ಸಿಡಿಸಿಸಿ ಸಾಧನಾ ಪ್ರಶಸ್ತಿ

Mangaluru - Shravan Kumar Nala

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2023-24ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ 2023-24 ಪ್ರಶಸ್ತಿ ಲಭಿಸಿದೆ. ಆ.14ರಂದು ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2023-24ನೇ ಸಾಲಿನ ವಾರ್ಷಿಕ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2012ರಲ್ಲಿ ಪ್ರಾರಂಭವಾಗಿ ದಶಮಾನೋತ್ಸವಕ್ಕೆ ನಗರದ ಪಡೀಲ್‌ನಲ್ಲಿ ಸ್ವಂತ ಪ್ರಧಾನ ಕಚೇರಿ ಹೊಂದಿರುತ್ತದೆ. ಪ್ರಸ್ತುತ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ 33 ಶಾಖೆಗಳನ್ನು ಹೊಂದಿರುವ ಸಂಘವು, 2023-24ನೇ ಸಾಲಿನಲ್ಲಿ ದುಡಿಯುವ ಬಂಡವಾಳ 23,655.02 ಲಕ್ಷ ಹೊಂದಿದ್ದು, ರೂ. 3.33 ಕೋಟಿಗೂ ಮಿಕ್ಕಿ ಲಾಭ ಗಳಿಸಿರುತ್ತದೆ.

ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಟಿ.ಜಿ. ರಾಜಾರಾಮ್ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ಎಸ್. ರಾಜು ಪೂಜಾರಿ, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ ರೈ, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಕೆ.ಹರಿಶ್ಚಂದ್ರ, ಎಂ.ಮಹೇಶ್ ಹೆಗ್ಡೆ, ಬಿ.ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ. ರೈ, ಕುಶಾಲಪ್ಪ ಗೌಡ ಪಿ., ಎಸ್. ಎನ್. ಮನ್ಮಥ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಉಭಯ ಜಿಲ್ಲೆಗಳ ಸಹಕಾರಿ ಸಂಘಗಳ ಉಪನಿಬಂಧಕರಾದ ಹೆಚ್. ಎನ್. ರಮೇಶ್, ಲಾವಣ್ಯ, ಉಭಯ ಜಿಲ್ಲೆಗಳ ಸಹಕಾರಿ ಯೂನಿಯನ್ ಅಧ್ಯಕ್ಷರುಗಳಾದ ಜಯಕರ್ ಶೆಟ್ಟಿ ಇಂದ್ರಾಳಿ, ಪ್ರಸಾದ್ ಕೌಶಲ್ ಶೆಟ್ಟಿ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಹಾಗೂ ಬ್ಯಾಂಕಿನ ಅಧಿಕಾರಿಗಳು ಉಪಸ್ಥಿತರಿದ್ದರು.