ಜಿಲ್ಲೆ

ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನದ ಸಾರ್ವಜನಿಕ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ಪರಿಶಿಷ್ಟರನ್ನು ವಂಚಿಸಲಾಗುತ್ತಿದೆ

ಮೈಸೂರು: ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆಂದು ಮೀಸಲಿಟ್ಟ ಹಣವನ್ನು ಈ ರೀತಿ ಸಾರ್ವಜನಿಕ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ಪರಿಶಿಷ್ಟರನ್ನು ವಂಚಿಸಲಾಗುತ್ತಿದೆ ಎಂದು ಸಾಮಾಜಿಕ ನ್ಯಾಯ ಸಬಲೀಕರಣ ವೇದಿಕೆ ಸದಸ್ಯ ಕೆ.ಎನ್.ಪ್ರಭುಸ್ವಾಮಿ ದೂರಿದರು.


ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನದ 25,000 ಕೋಟಿ ರೂ.ಅನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವುದು ಖಂಡನೀಯ. ಈ ರೀತಿ ಬಳಕೆಗೆ ಪೂರಕವಾಗಿರುವ ಕಾಯ್ದೆಯ ಸೆಕ್ಷನ್-7ಸಿ ಅನ್ನು ವಿಧಾನಮಂಡಲದ ಪ್ರಸ್ತುತ ಅಧಿವೇಶನದಲ್ಲಿಯೇ ರದ್ದು ಮಾಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.