ಜಿಲ್ಲೆ

ಹಾಲು, ಮೊಟ್ಟೆ ಜತೆ ವಾರದಲ್ಲಿ 3 ದಿನ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ: ಮಧು ಬಂಗಾರಪ್ಪ

ಬೆಂಗಳೂರು: 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುವ ಯೋಜನೆಗೆ ನಾಳೆ ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಸುಮಾರು 60 ಲಕ್ಷ ಶಾಲಾ ಮಕ್ಕಳಿಗೆ ಈಗಾಗಲೇ ವಾರದಲ್ಲಿ 5 ದಿನ ನೀಡುತ್ತಿರುವ ಹಾಲು ಮತ್ತು ವಾರದಲ್ಲಿ ಎರಡು ದಿನ ಮೊಟ್ಟೆ ಸೇರಿದಂತೆ ಇನ್ನು ಮುಂದೆ ವಾರಲ್ಲಿ 3 ದಿನ ರಾಗಿಮಾಲ್ಟ್ ಕೂಡ ನೀಡಲಾಗುವುದು. ರಾಗಿಮಾಲ್ಟ್ ಸ್ವಾದಿಷ್ಟವಾಗಿರುವ ಜತೆಗೆ ಮಕ್ಕಳನ್ನು ದೈಹಿಕವಾಗಿ ಸದೃಢವಾಗಿಸಲಿದೆ ಎಂದು ಸಚಿವ ಹೇಳಿದ್ದಾರೆ.

ಶಾಲಾ ಮಕ್ಕಳನ್ನು ಶಾಲೆಯತ್ತ ಸೆಳೆಯಲು ಹಾಗೂ ಮಕ್ಕಳ ಆರೋಗ್ಯದ ಮೇಲೆ ಗಮನವಿಟ್ಟು ರಾಜ್ಯ ಸರ್ಕಾರ ಶಾಲಾ ಮಕ್ಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಜಾರಿ ಮಾಡುತ್ತಿದೆ.