ಜಿಲ್ಲೆ

ಸಾಮಾಜಿಕ ಸೇವೆಯೊಂದಿಗೆ ಬೆಳವಣಿಗೆ : ಪ್ರವೀಣ್ ಕುಮಾರ್ ಶೆಟ್ಟಿ ಹೇಳಿಕೆ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಉಳ್ಳಾಲ

ಚಿಕಿತ್ಸಾ ವೆಚ್ಚ, ಶಿಕ್ಷಣಕ್ಕೆ ನೆರವು ಮುಂತಾದ ಕಾರ್ಯಕ್ರಮ ಜತೆ ಜಾತ್ಯತೀತ ನೆಲೆಯಲ್ಲಿ ಸರ್ವಧರ್ಮೀಯರ ಸಂಕಷ್ಟದಲ್ಲಿ ಭಾಗಿಯಾಗುತ್ತಾ ಸಾಮಾಜಿಕ ಸೇವೆಯೊಂದಿಗೆ ನಿರಂತರ ಬೆಳವಣಿಗೆ ಕಂಡಿರುವ ಸಂಘ, ಕರೊನಾ ಸಂದರ್ಭ ಸಂಕಷ್ಟದಲ್ಲಿದ್ದವರಿಗೆ ನೀಡಿದ ಸೇವೆ ಮರೆಯಲಾಗದು ಎಂದು ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಸಹಕಾರಿ ಸಂಘದ ಸಲಹೆಗಾರ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು.

ಬಂದರು ಉತ್ತರ ದಕ್ಕೆ ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರ ಸಂಘ ವತಿಯಿಂದ ಮಂಗಳೂರಿನ ಸೆಂಟ್ರಲ್ ಕಮಿಟಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಘದಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಎಂ.ಇಸ್ಮಾಯಿಲ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಜೆ.ಮಹಮ್ಮದ್ ಇಸಾಕ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಅಹ್ಮದ್ ಬಾವ ಬಜಾಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಬ್ದುಲ್ ಲತೀಫ್, ನಿರ್ದೇಶಕರಾದ ಯು.ಟಿ.ಅಹ್ಮದ್ ಶರೀಫ್, ಬಿ.ಇಬ್ರಾಹಿಂ, ಮುಹಮ್ಮದ್ ಅಶ್ರಫ್, ಎಂ.ಎ.ಗಫೂರ್, ಎಸ್.ಕೆ.ಇಸ್ಮಾಯಿಲ್, ಎಸ್.ಎಂ.ಇಬ್ರಾಹಿಂ, ಟಿ.ಎಚ್.ಹಮೀದ್, ಬಿ.ಮುಹಮ್ಮದ್ ಶಾಲಿ, ಎ.ಎಂ.ಕೆ.ಮುಹಮ್ಮದ್ ಇಬ್ರಾಹಿಂ, ಅನ್ವರ್ ಎ.ಎನ್.ಆರ್. ಉಪಸ್ಥಿತರಿದ್ದರು. ತಾಪಂ ಮಾಜಿ ಸದಸ್ಯ ಮಹಮ್ಮದ್ ಮುಸ್ತಫಾ ಮಲಾರ್ ನಿರೂಪಿಸಿದರು.

ಸಂಘವು ಸದಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ಮೀನುಗಾರರು, ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣ, ರೋಗಿಗಳಿಗೆ ನೆರವು ಒದಗಿಸುತ್ತಾ ಬಂದಿದೆ. ಲಾಕ್‌ಡೌನ್ ಸಂದರ್ಭ 25 ಲಕ್ಷ ರೂ. ಮೊತ್ತದ ಆಹಾರ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸಾಮಾಜಿಕ ಬದ್ಧತೆ ಪ್ರದರ್ಶಿಸಿದೆ. - ಜೆ.ಮಹಮ್ಮದ್ ಇಸಾಕ್, ಅಧ್ಯಕ್ಷರು, ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರ ಸಂಘ