ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ತಿಮ್ಮನಗೌಡರ ಎಜುಕೇಷನ್ ಅಕಾಡೆಮಿಯ ಪ್ರಿಸಂ ಪದವಿ ಪೂರ್ವ ಕಾಲೇಜು ವತಿಯಿಂದದ 2025- 26ನೇ ಸಾಲಿನ ಪ್ರಥಮ ಪಿಯುಸಿ. ಪ್ರವೇಶ ನೋಂದಣಿಗಾಗಿ ವಿದ್ಯಾರ್ಥಿಗಳಿಗೆ ಪ್ರತಿಭಾನ್ವೇಷಣೆ ಹಾಗೂ ಸ್ಕಾಲರ್‌ಷಿಪ್ ಪ್ರವೇಶ ಪರೀಕ್ಷೆಯನ್ನು ಡಿ. 5ರಂದು ಬೆಳಗ್ಗೆ 10 ಮತ್ತು ಮಧ್ಯಾಹ್ನ 2 ಗಂಟೆಗೆ ಆಯೋಜಿಸಲಾಗಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಆಧಾರದ ಮೇಲೆ ಪ್ರಥಮ ಪಿಯುಸಿಗೆ ಉಚಿತ ಪ್ರವೇಶದ ಜತೆಗೆ ಕಾಲೇಜು ಹಾಗೂ ಹಾಸ್ಟೆಲ್ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ. ಎಸ್‌ಎಸ್‌ಎಲ್‌ಸಿ ಕನ್ನಡ, ಇಂಗ್ಲಿಷ್ ಮಾಧ್ಯಮ, ಸಿಬಿಎಸ್‌ಇ ಅಥವಾ ಐಸಿಎಸ್‌ಇ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು. ಮಾಹಿತಿಗೆ ಸಪ್ತಾಪುರದಲ್ಲಿರುವ ಕಾಲೇಜನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.