ವಿಜಯಪುರದ ಚೇತನಾ ಪಿಯು ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಡಿಜಿಜೆ ಸ್ಕಾಲರ್‌ಶಿಪ್ ಪರೀಕ್ಷೆಯಲ್ಲಿ ಜಿಲ್ಲೆಯ ವಿವಿಧ ಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಪರೀಕ್ಷೆ ಬರೆದರು. ರಾಜಶ್ರೀ ಜುಗತಿ ಮತ್ತಿತರರಿದ್ದಾರೆ. 
ಜಿಲ್ಲೆ

ಸ್ಕಾಲರ್‌ಶಿಪ್ ಪರೀಕ್ಷೆ ಯಶಸ್ವಿ

ದತ್ತಾತ್ರೇಯ ಪಿ ಕುಲಕರ್ಣಿ

ವಿಜಯಪುರ : ನಗರದ ದರ್ಗಾ ರಸ್ತೆಯಲ್ಲಿನ ಚೇತನಾ ಪಿಯು ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪ್ರಥಮ ಪಿಯುಸಿ ಡಿಜಿಜೆ ಸ್ಕಾಲರ್‌ಶಿಪ್ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಚೇತನಾ ಶಿಕ್ಷಣ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ನೀಡಲಾಗುವ ಡಿಜಿಜೆ ಸ್ಕಾಲರ್‌ಶಿಪ್‌ನ ಈ ಪರೀಕ್ಷೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಬರೆದರು.

ಚೇತನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಜುಗತಿ ಮಾತನಾಡಿ, ಚೇತನಾ ಪಿಯುಸಿ ವಿಜ್ಞಾನ ಕಾಲೇಜು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ರಾಜ್ಯಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಜ್ಞಾನಾರ್ಜನೆ ನಡೆಸಿದ ಹಲವು ವಿದ್ಯಾರ್ಥಿಗಳು ಪ್ರತಿ ವರ್ಷ ಜೆಇಇ, ನೀಟ್ ಮತ್ತು ಕೆ-ಸೆಟ್ ಪರೀಕ್ಷೆಗಳಲ್ಲಿ ರ‌್ಯಾಂಕ್ ಪಡೆಯುವುದರ ಮೂಲಕ ಎಂಬಿಬಿಎಸ್ ಮತ್ತು ಇಂಜಿನಿಯರಿಂಗ್ ಕೋರ್ಸಿಗೆ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಈ ಬಾರಿ ನಡೆದ ಚೇತನಾ ಸ್ಕಾಲರ್ಶಿಪ್ ಪರೀಕ್ಷೆಯಲ್ಲಿ ಅತ್ಯುನ್ನತ ರಾಂಕ್ ಪಡೆದ ವಿದ್ಯಾಥಿಗಳು ಸ್ಕಾಲರ್‌ಶಿಪ್ ಸೌಲಭ್ಯ ಪಡೆಯಲಿದ್ದಾರೆ ಎಂದು ಅವರು ಹೇಳಿದರು.