ಕಾಸರಗೋಡು: ರಾಜ್ಯ ಪರಿಶಿಷ್ಟ ವರ್ಗ ಅಭಿವೃದ್ಧಿ ಇಲಾಖೆ ಅಯ್ಯಂಕಾಳಿ ಸ್ಮಾರಕ ಪ್ರತಿಭಾನ್ವೇಷಣೆ ಮತ್ತು ಅಭಿವೃದ್ಧಿ ಯೋಜನೆಯ ಪ್ರಕಾರ ಸರ್ಕಾರಿ ಯಾ ಅನುದಾನಿತ ಶಾಲೆಗಳಲ್ಲಿ 5, 8ನೇ ತರಗತಿಗಳಲ್ಲಿ ಕಲಿಯುತ್ತಿರುವ ಎಸ್‌ಟಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಪರೀಕ್ಷೆಗೆ ಹಾಜರಾಗಲು ಬಯಸುವ ಕಾಸರಗೋಡು ಪರಿಶಿಷ್ಟ ವರ್ಗ ಅಭಿವೃದ್ಧಿ ಕಚೇರಿಯ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ವರ್ಗ ವಿದ್ಯಾರ್ಥಿಗಳು ಕಾಸರಗೋಡು ಪರಿಶಿಷ್ಟ ವರ್ಗ ಅಭಿವೃದ್ಧಿ ಕಚೇರಿ, ಕಾಸರಗೋಡು, ನೀಲೇಶ್ವರಂ, ಎಣ್ಮಕಜೆ ಪರಿಶಿಷ್ಟ ವರ್ಗ ವಿಸ್ತರಣಾ ಕಚೇರಿಗಳಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಶಾಲಾ ಮುಖ್ಯಸ್ಥರ ದೃಢೀಕರಣದೊಂದಿಗೆ ನೀಡಬೇಕು. ಅರ್ಜಿಯೊಂದಿಗೆ ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಸಂಸ್ಥೆಯ ಮುಖ್ಯಸ್ಥರು ದೃಢೀಕರಿಸಿದ ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿಯ ಮೂಲ ಪ್ರಮಾಣಪತ್ರ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಆದ್ಯತೆಯ ಅಂಶಗಳನ್ನು ಸಾಬೀತುಪಡಿಸುವ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 10 ಆಗಿದ್ದು, ಮಾಹಿತಿಗಾಗಿ(04994-255466) ಸಂಪರ್ಕಿಸಬಹುದು.