ಕುಂಬಾರಹಳ್ಳ ಸರ್ಕಾರಿ ಪ್ರೌಢಶಾಲೆಯಲ್ಲಿ ಸರಸ್ವತಿ ಪೂಜೆಯೊಂದಿಗೆ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ತುಕಾರಾಮ ಹೆಗಡೆ, ಸದಸ್ಯರು, ಮುಖ್ಯಶಿಕ್ಷಕ ನಾರಾಯಣ ಶಾಸ್ತ್ರಿ, ಶಿಕ್ಷಕ ಸಿಬ್ಬಂದಿ ಇದ್ದರು. 
ಜಿಲ್ಲೆ

ಕುಂಬಾರಹಳ್ಳದಲ್ಲಿ ಶಾಲಾ ಪ್ರಾರಂಭೋತ್ಸವ

ದತ್ತಾತ್ರೇಯ ಪಿ ಕುಲಕರ್ಣಿ

ಚಿಕ್ಕಪಡಸಲಗಿ: ಸಮೀಪದ ಕುಂಬಾರಹಳ್ಳ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅದ್ದೂರಿಯಿಂದ ನಡೆಯಿತು.

ಎಸ್‌ಡಿಎಂಸಿಯವರು ಹಾಗೂ ಶಿಕ್ಷಕ ಸಿಬ್ಬಂದಿ ಮಕ್ಕಳಿಗೆ ಹೂವು ನೀಡಿ ಶಾಲೆಗೆ ಸ್ವಾಗತಿಸಿದರು. ಸರಸ್ವತಿ ಪೂಜೆಯೊಂದಿಗೆ ಆರಂಭೋತ್ಸವಕ್ಕೆ ಚಾಲನೆ ನೀಡಲಾಯಿತು.

ಮುಖ್ಯಶಿಕ್ಷಕ ನಾರಾಯಣ ಶಾಸ್ತ್ರಿ ಮಾತನಾಡಿ, ಮಕ್ಕಳು ಮನುಕುಲದ ಬೆಳಕಾಗಿದ್ದು, ಉತ್ತಮ ಶಿಕ್ಷಣ ನೀಡುವುದು ನಮ್ಮೆಲ್ಲರ ಕರ್ತವ್ಯ. ಮೊದಲ ದಿನದಿಂದಲೇ ಮಗು ಶಾಲೆಗೆ ಬಂದರೆ ಭವಿಷ್ಯ ನಿರ್ಮಾಣ ಸುಲಭವಾಗುತ್ತದೆ ಎಂದು ಹೇಳಿದರು.

ಮಕ್ಕಳಿಗೆ ಎಸ್‌ಡಿಎಂಸಿ ಅಧ್ಯಕ್ಷ ತುಕಾರಾಮ ಹೆಗಡೆ, ಸದಸ್ಯರಾದ ನಿಂಗಪ್ಪ ತೇರದಾಳ, ಅಪ್ಪಾಸಾಬ್ ನದಾಫ, ಸದಾಶಿವ ಮಾಳಿ, ಹನುಮಂತ ಮರನೂರ, ಪದ್ಮವ್ವ ಹುದಲಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ದುಂಡಪ್ಪ ಬಾಡಗಿ, ಸದಾಶಿವ ಮರನೂರ, ರಾಜು ಮಾಳಿ ಅವರು ಮಕ್ಕಳಿಗೆ ಹೂಗುಚ್ಛ ನೀಡಿ ಶುಭ ಹಾರೈಸಿದರು.

ಶಿಕ್ಷಕರಾದ ಸಂಜೀವ ಝಂಬುರೆ, ಬಾಹುಬಲಿ ಮುತ್ತೂರ ,ಚಂದ್ರಕಾಂತ ಪೋಲಿಸ್, ಶಾರದಾ ಮಠ, ಆಸೀಫಾಭಾನು ಮೋಮಿನ್, ಸವಿತಾ ಬೆನಕಟ್ಟಿ, ಶಕುಂತಲಾ ಬಿರಾದಾರ ಉಪಸ್ಥಿತರಿದ್ದು ಮಕ್ಕಳ ಮೇಲೆ ಪುಷ್ಪ ಗೈದು ಸ್ವಾಗತ ಕೋರಿದರು.

ಶಿಕ್ಷಕ ಬಾಹುಬಲಿ ಮುತ್ತೂರ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಶಾರದಾ ಮಠ ವಂದಿಸಿದರು.