ವಿಟ್ಲ: ಪಿ.ಎಂ.ಶ್ರೀ ಸರ್ಕಾರಿ ಫ್ರೌಢ ಶಾಲೆ(ಆರ್ ಎಂ ಎಸ್ ಎ) ಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಶ್ರೀಯೋಗೀಶ್ವರ ಗೋರಕ್ಷನಾಥ ಮಠದ ರಾಜಗುರು ಶ್ರದ್ಧಾನಂತಾಜೀ ಮಹಾರಾಜ್ ಆಶೀರ್ವಚನ ನೀಡಿದರು. ನಿವೃತ್ತ ಶಿಕ್ಷಕಿ ಪ್ರೇಮಲತಾ ದ್ವಜಾರೋಹಣ ನಡೆಸಿದರು. ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ನಡೆಯಿತು.
ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಽಕಾರಿ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ರಜತ್ ಅಳ್ವ, ಪ್ರೌಢ ಶಾಲಾ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷೆ ರಶ್ಮಿ ಹರೀಶ್, ಪ್ರಾಥಮಿಕ ವಿಭಾಗದ ಎಸ್ ಡಿ ಎಂ ಸಿ ಅಧ್ಯಕ್ಷ ರವಿಶಂಕರ್ ಶಾಸ್ತ್ರಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಕೆ. ಉಪಸ್ಥಿತರಿದ್ದರು.
ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಫೆಲ್ಸಿಟಾಸ್ ಈವಾ ಗಲ್ಬಾವೊ ಸ್ವಾಗತಿಸಿದರು. ಜಗದೀಶ್ ವಂದಿಸಿದರು. ಅಶ್ವಿನಿ ನಿರೂಪಿಸಿದರು.