ಜಿಲ್ಲೆ

ಸುಪ್ತ ಪ್ರತಿಭೆ ಅನಾವರಣಕ್ಕೆ ವೇದಿಕೆ - ಕರುಣಾಕರ ನಾಯ್ತೊಟ್ಟು ಅನಿಸಿಕೆ - ಪಿಎಂಶ್ರೀ ಪ್ರೌಢಶಾಲೆ ಪ್ರತಿಭಾ ಪುರಸ್ಕಾರ

Mangaluru - Nishantha Narayana

ವಿಟ್ಲ: ಮಗುವಿನ ಸುಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆ ಕಲ್ಪಿಸಬೇಕು. ಸರ್ಕಾರಿ ಶಾಲೆಯ ವಾರ್ಷಿಕೋತ್ಸವ ಸಂಭ್ರಮವಾಗಿ ನಡೆಯುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಹೇಳಿದರು.

ವಿಟ್ಲ ಪಿ.ಎಂ. ಶ್ರೀ ಸರ್ಕಾರಿ ಪ್ರೌಢಶಾಲೆಯ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಕಲಿತ ಗ್ರಾಮೀಣ ಪ್ರತಿಭೆಗಳನ್ನು ರಾಷ್ಟ್ರ ಮಟ್ಟಕ್ಕೆ ಏರಿಸುವ ಸಾಧನೆ ಬಹಳಷ್ಟು ದೊಡ್ಡದು. ಶಿಕ್ಷಕರ ಅವಿರತ ಪ್ರಯತ್ನದಿಂದ ವಿದ್ಯಾರ್ಥಿಗಳು ವಿಶಿಷ್ಟ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯರಾದ ವಿ.ಕೆ. ಅಶ್ರಫ್, ಕೃಷ್ಣ, ಶ್ರೀ ಭಾರತೀ ಜನಾರ್ಧನ ಸೇವಾ ಟ್ರಸ್ಟ್ ಕಾರ್ಯದರ್ಶಿ ಪಿ. ಸುಬ್ರಾಯ ಪೈ, ಪ್ರೆಂಡ್ಸ್ ವಿಟ್ಲ ತಂಡದ ಮುರಳೀಧರ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋನಪ್ಪ ಗೌಡ, ಬಂಟ್ವಾಳ ತಾಲೂಕು ಕಬಡ್ಡಿ ಅಸೋಸಿಯೇಶನ್ ಉಪಾಧ್ಯಕ್ಷ ರಮಾನಾಥ ವಿಟ್ಲ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಫೆಲ್ಸಿಟಾ ಈವಾ ಗಲ್ಬಾವೊ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಕೆ., ಪ್ರಾಥಮಿಕ ವಿಭಾಗ ನಾಯಕ ಶ್ರವಣ್ ಪ್ರಸಾದ್, ಪ್ರೌಢ ವಿಭಾಗ ಪಿ. ಐ. ಶಿಶಿರ ಕುಮಾರ್ ಉಪಸ್ಥಿತರಿದ್ದರು.

ಎಸ್.ಡಿ.ಎಂ.ಸಿ ಪ್ರಾಥಮಿಕ ಶಾಲಾ ವಿಭಾಗ ಅಧ್ಯಕ್ಷ ರವಿಶಂಕರ ಸಿ. ಸ್ವಾಗತಿಸಿದರು. ಎಸ್.ಡಿ.ಎಂ.ಸಿ ಪ್ರೌಢಶಾಲಾ ವಿಭಾಗದ ಅಧ್ಯಕ್ಷೆ ರಶ್ಮಿ ಹರೀಶ್ ವಂದಿಸಿದರು. ನಿರಂಜನ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಶ್, ವಿದ್ಯಾಶಂಕರ್, ಶ್ವೇತಾ, ಶಿಕ್ಷಕರಾದ ವಾರಿಜಾ ಕುಮಾರಿ, ಅರುಣ, ದಿವ್ಯಾ ಸಹಕರಿಸಿದರು.

ದತ್ತಿನಿಽ ವಿತರಣೆ

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಬಹುಮಾನ ಹಾಗೂ ದತ್ತಿ ನಿಽಗಳನ್ನು ವಿತರಿಸಲಾಯಿತು. ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ನಿವೃತ್ತ ಸಹ ಶಿಕ್ಷಕ ಪ್ರೇಮಲತಾ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ವಾರ್ಷಿಕ ಚಟುವಟಿಕೆಯ ಪುಸ್ತಕ ಬಿಡುಗಡೆ ಮಾಡಲಾಯಿತು.