ಕುಶಾಲನಗರ:
ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ವಾರ್ಷಿಕೋತ್ಸವ ಆಚರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಪ್ರದೀಪ್ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹೆಬ್ಬಾಲೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ನಾರಾಯಣ್ ಮತ್ತು ಹುಲಸೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಜು, ನಿವೃತ್ತ ಶಿಕ್ಷಕ ರಮೇಶ, ಹೆಬ್ಬಾಲೆ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಚಂದ್ರಪ್ಪ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಅರ್ಪಿತ ಆಗಮಿಸಿದ್ದರು. ಮುಖ್ಯ ಶಿಕ್ಷಕ ವೆಂಕಟೇಶ, ಶಿಕ್ಷಕಿ ಜಾನಕಿ ವೇದಿಕೆಯಲ್ಲಿ ಇದ್ದರು.
ಕಾರ್ಯಕ್ರಮದಲ್ಲಿ ಪೋಷಕರಿಗಾಗಿ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಪೋಷಕರು ಭಾಗವಹಿಸಿ ಸಂಭ್ರಮಿಸಿದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾ ಮಕ್ಕಳಿಂದ ಪಥ ಸಂಚಲನ. ಸಾಮೂಹಿಕ ಕವಾಯಿತು. ಲೆಜಿಮ್ಸ್, ಡಂಬಲ್ಸ್ ಏರ್ಪಡಿಸಲಾಗಿತ್ತು.
ಸಿ.ಆರ್.ಪಿ. ಆದರ್ಶ, ಬಿ. ಆರ್. ಪಿ. ಶಿವಕುಮಾರ್ ಮಕ್ಕಳ ಪಥಸಂಚಲನ ವೀಕ್ಷಣೆ ಮಾಡಿ ಗೌರವ ವಂದನೆ ಸ್ವೀಕರಿಸಿದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.