ರಾಯಬಾಗ ತಾಲೂಕಿನ ನಿಪನಾಳ ಗ್ರಾಮದ ಬಿಲಕಾರ ತೋಟದ ಸರ್ಕಾರಿ ಕಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ಶಾಸಕರ ಅನುದಾನದಲ್ಲಿ ಎರಡು ಕೊಠಡಿ ಮಂಜೂರಿಗೆ ಒತ್ತಾಯಿಸಿ ಶಾಸಕ ಡಿ.ಎಂ.ಐಹೊಳೆ ಅವರಿಗೆ ಶಾಲೆ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಮನವಿ ಸಲ್ಲಿಸಿದರು. 
ಜಿಲ್ಲೆ

ಶಾಲೆಗೆ ಹೆಚ್ಚುವರಿ ಕೊಠಡಿ ಮಂಜೂರಿಗೆ ಆಗ್ರಹ

ರಾಯಬಾಗ: ತಾಲೂಕಿನ ನಿಪನಾಳ ಗ್ರಾಮದ ಬಿಲಕಾರ ತೋಟದ ಸರ್ಕಾರಿ ಕಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ಶಾಸಕರ ಅನುದಾನದಲ್ಲಿ ಎರಡು ಹೆಚ್ಚುವರಿ ಕೊಠಡಿ ಮಂಜೂರು ಮಾಡುವಂತೆ ಶಾಸಕ ಡಿ.ಎಂ. ಐಹೊಳೆಗೆ ಶನಿವಾರ ಶಾಸಕರ ಕಚೇರಿಯಲ್ಲಿ ಶಾಲೆ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಮನವಿ ಸಲ್ಲಿಸಿದರು.

ಈ ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ ಒಟ್ಟು 68 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 5ನೇ ತರಗತಿ ನಂತರ ಮುಂದಿನ ಶಿಕ್ಷಣಕ್ಕಾಗಿ 4-5 ಕಿ.ಮೀ. ದೂರದ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮಕ್ಕೆ ಹೋಗುವಂತಾಗಿದೆ. ಕೆಲ ವಿದ್ಯಾರ್ಥಿಗಳು 5ನೇ ತರಗತಿ ಮುಗಿದ ಕೂಡಲೇ ತಮ್ಮ ವಿದ್ಯಾಭ್ಯಾಸವನ್ನು ಕೂಡ ಮೊಟಕುಗೊಳಿಸುತ್ತಿದ್ದಾರೆ. ಬರುವ ಶೈಕ್ಷಣಿಕ ವರ್ಷದಿಂದ ಇದೇ ಶಾಲೆಯಲ್ಲಿ 6ನೇ ತರಗತಿ ಪ್ರಾರಂಭಿಸಲು ನಿರ್ಧರಿಸಿದ್ದರಿಂದ ವಿದ್ಯಾರ್ಥಿಗಳಿಗೆ 2 ಕೊಠಡಿಗಳು ಅವಶ್ಯಕವಾಗಿವೆ ಎಂದು ತಿಳಿಸಿದರು. ಸದಾಶಿವ ಘೋರ್ಪಡೆ, ಅಣ್ಣಾಸಾಹೇಬ ಖೇಮಲಾಪುರೆ, ಶಂಕರ ಕುರಬೆಟ್ಟ, ಮುಖ್ಯಶಿಕ್ಷಕ ರಮೇಶ ಬನಸೊಡೆ, ವೈ.ಬಿ. ಬಿಲಕಾರ, ಮಂಜು ಗದಾಡಿ ಮತ್ತು ಶಾಲೆ ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.