ಹುಬ್ಬಳ್ಳಿ: ಇಲ್ಲಿಯ ಭವಾನಿನಗರ ವಿವೇಕಾನಂದ ಕಾಲನಿಯಲ್ಲಿರುವ ಡಾ. ಪಿ.ವಿ. ದತ್ತಿ ರೋಟರಿ ಕಿವುಡ ಮಕ್ಕಳ ಶಾಲೆಗೆ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಪ್ರವೇಶ ಪ್ರಾರಂಭವಾಗಿದ್ದು, ಶ್ರವಣ ದೋಷವುಳ್ಳ ಮಕ್ಕಳ ಪಾಲಕರು ಸಂಪರ್ಕಿಸಬಹುದು.
ಒಂದರಿಂದ ಏಳನೇ ತರಗತಿವರೆಗೆ ಇಲ್ಲಿ ತರಗತಿಗಳು ನಡೆಯುತ್ತವೆ. ನುರಿತ ಹಾಗೂ ವಿಶೇಷ ತರಬೇತಿ ಪಡೆದ ಸಿಬ್ಬಂದಿ ಇದ್ದು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆ ಮತ್ತು ವಿವಿಧ ಕರಕುಶಲ ಕಲೆಗಳು, ಕ್ರೀಡೆಗಳ ತರಬೇತಿ ನೀಡಲಾಗುತ್ತದೆ.
ಶಿಕ್ಷಣ ಹಾಗೂ ತರಬೇತಿ ಸಂಪೂರ್ಣ ಉಚಿತವಾಗಿದ್ದು, ಆಸಕ್ತರು, ಶಾಲೆಗೆ ಭೇಟಿ ನೀಡಲು ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.