ಜಿಲ್ಲೆ

ರೋಟರಿಯಿಂದ ಉಚಿತ ಬ್ಯಾಗ್ ವಿತರಣೆ

reportermys

ಚಾಮರಾಜನಗರ: ತಾಲೂಕಿನ ಮುಕ್ಕಡಹಳ್ಳಿ ಸರ್ಕಾರಿ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಗೆ ರೋಟರಿ ಸಂಸ್ಥೆ ವತಿಯಿಂದ ಉಚಿತ ಬ್ಯಾಗ್ ವಿತರಿಸಲಾಯಿತು.


ರೋಟರಿ ಅಧ್ಯಕ್ಷ ಕೆ.ಎಂ.ಮಹದೇವಸ್ವಾಮಿ ಮಾತನಾಡಿ, ವಿದ್ಯಾದಾನಕ್ಕಿಂತ ಶ್ರೇಷ್ಠದಾನ ಮತ್ತೊಂದು ಇಲ್ಲ. ನಮ್ಮ ರೋಟರಿ ಸಂಸ್ಥೆಯು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸುತ್ತಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ರೋಟರಿ ಸಂಸ್ಥೆ ಅನನ್ಯ ಕೊಡುಗೆ ನೀಡಿದೆ. ವಿದ್ಯಾರ್ಥಿಗಳು ಇಂತಹ ಅವಕಾಶವನ್ನು ಸದಪಯೋಗಪಡಿಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ಶಾಲೆಗೆ, ಗ್ರಾಮಕ್ಕೆ, ಪಾಲಕರಿಗೆ ಕೀರ್ತಿ ತರುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.


ಸಂಸ್ಥೆಯ ಕಾರ್ಯದರ್ಶಿ ಕಾಗಲವಾಡಿ ಚಂದ್ರು, ಸ್ಥಾಪಕ ಸದಸ್ಯರಾದ ಜಿ.ಆರ್.ಅಶ್ವಥ್‌ನಾರಾಯಣ್, ಸಿ.ವಿ.ಶ್ರೀನಿವಾಸಶೆಟ್ಟಿ, ಪ್ರಕಾಶ್, ಚಂದ್ರಪ್ರಭುಜೈನ್, ಸಿದ್ದಮಲ್ಲಪ್ಪ, ನಾಗರಾಜು, ಅಂಕಶೆಟ್ಟಿ, ಮುಖ್ಯಶಿಕ್ಷಕ ಲಿಂಗರಾಜಮ್ಮಣಿ, ಎಸ್‌ಡಿಎಂಸಿ ಅಧ್ಯಕ್ಷ ಸುಬ್ರಹ್ಮಣ್ಯ, ಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘ ಅಧ್ಯಕ್ಷ ಮಂಜುಪ್ರಸಾದ್, ಕಾರ್ಯದರ್ಶಿ ಮಹದೇವಯ್ಯ,(ಗೋಪಿ) ಶಾಲಾಮಕ್ಕಳು, ಪಾಲಕರು ಹಾಜರಿದ್ದರು.