ಪುಷ್ಪ ರವಿ ನ್ಯಾಷನಲ್ ಸ್ಕೂಲ್ನಲ್ಲಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ವೀಕ್ಷಿಸುತ್ತಿರುವ ಪ್ರಾಂಶುಪಾಲ ರೇವಣ್ಣ ಗೌಡ ಮತ್ತು ವಿದ್ಯಾರ್ಥಿಗಳು. 
ಜಿಲ್ಲೆ

ವಿಜ್ಞಾನ ವಸ್ತು ಪ್ರದರ್ಶನ

ನಾಗೇಶ ಎಸ್

ಗಂಡಸಿ: ಹೋಬಳಿಯ ಗಂಡಸಿ ಹ್ಯಾಂಡ್ ಪೋಸ್ಟ್ ಪುಷ್ಪ ರವಿ ನ್ಯಾಷನಲ್ ಸ್ಕೂಲ್ನಲ್ಲಿ ಶನಿವಾರ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.

ಪುಷ್ಪ ರವಿ ಐಟಿಐ ಕಾಲೇಜಿನ ಪ್ರಾಂಶುಪಾಲ ರೇವಣ್ಣಗೌಡ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡುವುದರಿಂದ ಕಲಾತ್ಮಕ ಕೌಶಲ ವೃದ್ಧಿಗೆ ಸಹಕಾರಿಯಾಗಲಿದೆ ಎಂದರು. ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಾಲೆಯ 200 ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಪ್ರಾಜೆಕ್ಟೃ್ಗಳನ್ನು ಪ್ರದರ್ಶಿಸಿ, ಮಾಹಿತಿ ನೀಡಿದರು.