ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ಸಂಸ್ಥೆಯ ಪರಪ್ಪ ಚನ್ನಪ್ಪ ಜಾಬಿನ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅಂತರ್ ಶಾಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಸಾಂಸತಿಕ ಕಾರ್ಯಕ್ರಮವನ್ನು ನ. 28ರಂದು ಹಮ್ಮಿಕೊಳ್ಳಲಾಗಿದೆ.
ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನ ಹಾಗೂ ಪಾಲ್ಗೊಂಡ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಮಾಣ ಪತ್ರ ನೀಡಲಾಗುವುದು.
ಕೆಎಲ್ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ ಅವರು ವಸ್ತು ಪ್ರದರ್ಶನದ ಪೋಸ್ಟರ್ ನ್ನು ಅನಾವರಣಗೊಳಿಸಿ ಮಾತನಾಡಿ, ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಿದರು.
ಪ್ರಾಚಾರ್ಯರಾದ ವಿ.ಆರ್. ವಾಘ್ಮೋಡಿ, ಡಾ. ಎಲ್.ಡಿ. ಹೊರಕೇರಿ ಇತರರು ಇದ್ದರು.