module: h; hw-remosaic: 0; touch: (-1.0, -1.0); modeInfo: ; sceneMode: Auto; cct_value: 0; AI_Scene: (-1, -1); aec_lux: 82.46407; hist255: 0.0; hist252~255: 0.0; hist0~15: 0.0; 
ಜಿಲ್ಲೆ

ಪ್ರತಿಭೆ ಅನಾವರಣಕ್ಕೆ ವೇದಿಕೆ ಬೇಕು

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ಸೂಲಿಬೆಲೆ

ವಿದ್ಯಾರ್ಥಿಗಳಲ್ಲಿ ಅನೇಕ ಪ್ರತಿಭೆ ಅಡಗಿರುತ್ತದೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ಮೂಲಕ ಪ್ರತಿಭೆಗಳನ್ನು ಹೊರ ತರುವ ಕೆಲಸ ಮಾಡಬೇಕು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶಗೌಡ ಹೇಳಿದರು.

ಚಿಕ್ಕಹರಳಗೆರೆ ರಿಷಿಕುಲ್ ವಿದ್ಯಾಪೀಠದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳ ಮಾನಸಿಕ ವಿಕಸನಕ್ಕೆ ಪೂರಕವಾದ ವಿಜ್ಞಾನ ವಸ್ತು ಪ್ರದರ್ಶನ ಭವಿಷ್ಯದಲ್ಲಿನ ಉನ್ನತ ವ್ಯಾಸಂಗಕ್ಕೆ ಅವಶ್ಯವಿರುವ ವಾತಾವರಣ ಕಲ್ಪಿಸಿಕೊಟ್ಟಿದೆ, ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಸರಳವಾಗಿ ಕಲಿಸಿಕೊಡುವ ಪ್ರಯತ್ನ ಶಿಕ್ಷಕರು ಮಾಡಬೇಕು ಎಂದು ಸಲಹೆ ನೀಡಿದರು.

ರಿಷಿಕುಲ್ ವಿದ್ಯಾಪೀಠದ ಸಂಸ್ಥಾಪಕ ಅಧ್ಯಕ್ಷ ಕೆ.ಆರ್.ದೇವರಾಜ್ ಮಾತನಾಡಿ, ಪ್ರತಿವರ್ಷ ಶಾಲೆಯಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಅನುಗುಣವಾಗಿ ವಸ್ತು ಪ್ರದರ್ಶನಗಳನ್ನು ಆಯೋಜಿಸಿ ವಿದ್ಯಾರ್ಥಿಗಳಲ್ಲಿರುವ ಬೌದ್ಧಿಕ ಗುಣಮಟ್ಟವನ್ನು ಪರಿಶೀಲಿಸಲಾಗುತ್ತದೆ ಎಂದರು. ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುವ ಹಿನ್ನಲೆಯಲ್ಲಿ ಸ್ಮಾರ್ಟ ಕ್ಲಾಸ್ ಹಾಗೂ ಅನ್‌ಲೈನ್ ತರಗತಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.