ಹುಬ್ಬಳ್ಳಿ: ನಗರದ ಕೆಎಲ್‌ಇ ಸಂಸ್ಥೆಯ ಪ್ರೇರಣಾ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅಂತರ ಶಾಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ಡಿ. 20ರಂದು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ ತಿಳಿಸಿದರು.
ಮಹಾವಿದ್ಯಾಲಯದಲ್ಲಿ ಸೋಮವಾರ ವಸ್ತು ಪ್ರದರ್ಶನದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನ ಹಾಗೂ ಪಾಲ್ಗೊಂಡವರಿಗೆ ಪ್ರಮಾಣಪತ್ರ ನೀಡಲಾಗುವುದು. ಭಾಗವಹಿಸುವ ವಿದ್ಯಾರ್ಥಿಗಳಿಗೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ ಎಂದರು.
ಪ್ರಾಚಾರ್ಯ ಪ್ರೊ. ಮಲ್ಲಿಕಾರ್ಜುನ ರಾವ್ ದಾಡಿ, ಉಪನ್ಯಾಸಕರಾದ ಗಿರೀಶ ಮಠದ, ಸಿದ್ದಲಿಂಗಮ್ಮ ಹಿರೇಮಠ ಹಾಗೂ ಡಾ. ಚಂದ್ರಾಣಿ ಇತರರು ಈ ಸಂದರ್ಭದಲ್ಲಿದ್ದರು.