ಜಿಲ್ಲೆ

ಸ್ಕೌಟ್ಸ್, ಗೈಡ್ಸ್‌ನಿಂದ ಯುವಜನಾಂಗ ಸದೃಢ

ಕುಂದಾಪುರ: ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಆಂದೋಲನ ಜಗತ್ತಿನಾದ್ಯಂತ ಪಸರಿಸಿ ಯುವ ಸಮುದಾಯವನ್ನು ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿಸಿದ್ದು, ಉತ್ತಮ ಪ್ರಜೆಗಳಾಗಿ ರೂಪಿಸಲು ಸಹಕಾರಿಯಾಗಿದೆ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಹೇಳಿದರು.

ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನ ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ಪ್ರದೀಪ್ ಕೆ., ವಿದ್ಯಾರ್ಥಿ ಪಾಲಕ ರಾಜಣ್ಣ, ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗದ ಶಿಕ್ಷಕರಾದ ಗಿರೀಶ್, ಸೂರ್ಯ, ಜಯಲತಾ ಮೊದಲಾದವರು ಉಪಸ್ಥಿತರಿದ್ದರು.

ಹರೀಶ್ ಪ್ರಸ್ತಾವನೆಗೈದರು. ಪವಿತ್ರಾ ವಂದಿಸಿದರು. ಸಂತೋಷ್‌ಕುಮಾರ್ ಕಾರ್ಯಕ್ರಮ ನಿರೂಪಿಸಿದರು.