ಬೆಳ್ತಂಗಡಿ: ದೇಶ ಸೇವೆಯೇ ಈಶ ಸೇವೆ ಎಂಬ ಸದುದ್ದೇಶದಿಂದ ಪ್ರಾರಂಭವಾದದ್ದೇ ರಾಷ್ಟ್ರೀಯ ಸೇವಾ ಯೋಜನೆ. ರಾಷ್ಟ್ರೀಯ ಸೇವಾ ಯೋಜನೆಯ ಶಿಕ್ಷಣದಿಂದ ಆತ್ಮೋನ್ನತಿ ಸಾಧಿಸಲು ಸಾಧ್ಯ. ಸಾವಾಜಿಕ ಕಳಕಳಿಯ ಕಾರ್ಯ ಚಟುವಟಿಕೆಗಳಿಗೆ ವೇದಿಕೆಯಾಗಿದೆ. ಇದರಿಂದ ಒಳ್ಳೆಯ ವ್ಯಕ್ತಿತ್ವ, ಶಿಕ್ಷಣ ಹಾಗೂ ಜೀವನಕ್ಕೆ ವಾರ್ಗದರ್ಶನ ದೊರೆಯುತ್ತದೆ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಹೇಳಿದರು. ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ವಾತನಾಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುವಾರ್ ಬಿ. ಅಧ್ಯಕ್ಷತೆ ವಹಿಸಿದ್ದರು. ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಸೇನೆರಬೆಟ್ಟು ಶುಭ ಹಾರೈಸಿದರು. ಮೈ ಭಾರತ್ ಪೋರ್ಟಲ್ ಮತ್ತು ಹೆಣ್ಣು ಭ್ರೂಣ ಹತ್ಯೆಯ ನಿಷೇಧದ ಬಗ್ಗೆ ವಾಹಿತಿ ಇರುವ ಕರಪತ್ರವನ್ನು ಕೊಲ್ಲಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವಾಜಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ ಬಿಡುಗಡೆಗೊಳಿಸಿದರು. ಶಿಬಿರ ಸಮಿತಿ ಅಧ್ಯಕ್ಷ ಮೋಹನ್ ಕಿಲ್ಲೂರು, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಜಿಯಾ ಹಾಗೂ ಮುಖ್ಯಶಿಕ್ಷಕ ರಮೇಶ್ ಪೈಲಾರ್, ಎನ್ನೆಸ್ಸೆಸ್ ವಿದ್ಯಾರ್ಥಿ ನಾಯಕರಾದ ಆದಿತ್ಯ ವಿ. ಹಾಗೂ ಪ್ರಾಪ್ತಿ ಗೌಡ ಉಪಸ್ಥಿತರಿದ್ದರು. ಯೋಜನಾಧಿಕಾರಿ ಡಾ.ಪ್ರಸನ್ನಕುವಾರ ಐತಾಳ್ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ವಂದಿಸಿದರು. ಸ್ವಯಂಸೇವಕಿ ಸಾಕ್ಷಿ ನಿರೂಪಿಸಿದರು.
ಯುವ ಜನತೆಗೆ ಸರಿಯಾದ ವಾರ್ಗದರ್ಶನ ನೀಡುವಲ್ಲಿ ವಿಫಲರಾಗುತ್ತಿದ್ದೇವೆ. ಎಲ್ಲದಕ್ಕೂ ಯುವಶಕ್ತಿಯ ಸದ್ಬಳಕೆ ಆಗಬೇಕಾಗಿದೆ. ಇದಕ್ಕಾಗಿ ಯುವಕರು ಸವಾಜದಲ್ಲಿ ಹಾಗೂ ರಾಷ್ಟ್ರಸೇವೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ಪ್ರಮೋದ್ ಕುವಾರ್, ಎಸ್‌ಡಿಎಂ ಪಿಯು ಕಾಲೇಜು ಪ್ರಾಚಾರ್ಯ https://www.vijayavani.net/mangalore-adc-warn-against-gambling https://www.vijayavani.net/lorry-collided-with-an-autorickshaw