ಜಿಲ್ಲೆ

ಸಾಧನೆಗಳೆಡೆಗಿನ ತುಡಿತದಿಂದ ಉತ್ತುಂಗಕ್ಕೆ : ಜಗದೀಶ್ ಮುಗುಳಿ ಅಭಿಮತ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಸಾಧನೆಗಳೆಡೆಗಿನ ತುಡಿತ ಮತ್ತು ಅದಕ್ಕಾಗಿ ಪ್ರತಿನಿತ್ಯದ ಪ್ರಯತ್ನ ನಮ್ಮನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದು ಜಿಐ ಆಟೋ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಜಗದೀಶ್ ಮುಗುಳಿ ಹೇಳಿದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಇಂದ್ರಪ್ರಸ್ಥ ಸಭಾಂಗಣದಲ್ಲಿ ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ವತಿಯಿಂದ ‘ಎಸ್.ಡಿ.ಎಂ ನೆನಪಿನಂಗಳ’ ಕಾಲೇಜಿನ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ, ವಿದ್ಯಾರ್ಥಿವೇತನ ವಿತರಣೆ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆಗೆ ದೇಣಿಗೆ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಮಾತನಾಡಿದರು. ಎಸ್.ಡಿ.ಎಂ. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದರು. ಅಶೋಕ್ ಭಟ್, ಬಿ.ಕೆ ಧನಂಜಯ್ ರಾವ್ ಮೊದಲಾದವರಿದ್ದರು. ಕನ್ನಡ ಪ್ರಾಧ್ಯಾಪಕ ಡಾ.ದಿವಾ ಕೊಕ್ಕಡ ನಿರೂಪಿಸಿದರು. ಎಸ್.ಡಿ.ಎಂ. ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಧನಂಜಯ್ ರಾವ್ ವಂದಿಸಿದರು.

ವಿದ್ಯಾರ್ಥಿವೇತನ ವಿತರಣೆ

ಎಸ್.ಡಿ.ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಕುಮಾರ್ ಹೆಗ್ಡೆ, ನಿವೃತ್ತ ಉಪ ಪ್ರಾಂಶುಪಾಲ ಎಸ್.ಎನ್.ಕಾಕತ್ಕಾರ್ ಮತ್ತು ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ. ಅವರನ್ನು ಸನ್ಮಾನಿಸಲಾಯಿತು. 20 ಮಂದಿ ಅರ್ಹ ವಿದ್ಯಾರ್ಥಿಗಳಿಗೆ ತಲಾ 5 ಸಾವಿರದಂತೆ 1 ಲಕ್ಷ ರೂ. ಮೊತ್ತದ ವಿದ್ಯಾರ್ಥಿವೇತನ ನೀಡಿದರು. ಎಸ್.ಡಿ.ಎಂ. ಕಾಲೇಜಿನಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ಅರ್ಹ 250 ವಿದ್ಯಾರ್ಥಿಗಳಿಗೆ 9 ಲಕ್ಷ ರೂ. ಮೌಲ್ಯದ ಬಿಸಿ ಊಟದ ಯೋಜನೆಗೆ ಎಸ್.ಡಿ.ಎಂ. ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ತಲಾ 2 ಲಕ್ಷ ರೂ. ಮೊತ್ತದ ದೇಣಿಗೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ. ಅವರಿಗೆ ಹಸ್ತಾಂತರಿಸಲಾಯಿತು.

v