ಮಂಗಳೂರು: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ( 66) ಅವರು ಭಾನುವಾರ ರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಪಡೆಯುತ್ತಿದ್ಧ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಬಂಧು ವರ್ಗ, ಕುಟುಂಬಸ್ಥರನ್ನು ಆಗಲಿದ್ದಾರೆ. ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿದ್ದರು. ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿಯೂ ಹಲವು ವರ್ಷಗಳ ಕಾಲ ಅವರು ಸೇವೆ ಸಲ್ಲಿಸಿದ್ದರು.