ಜಿಲ್ಲೆ

ಎಸ್​ಡಿಎಂ ಸಂಸ್ಥಾಪನಾ ದಿನ ಆಚರಣೆ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ 45ನೇ ಸಂಸ್ಥಾಪನಾ ದಿನವನ್ನು ಇತ್ತೀಚೆಗೆ ಆಚರಿಸಲಾಯಿತು.

ಎಸ್​ಡಿಎಂಇ ಸೊಸೈಟಿ ಕಾರ್ಯದರ್ಶಿ ಜೀವಂಧರಕುಮಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಎಸ್​ಡಿಎಂಇ ಸೊಸೈಟಿಯು ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅಂದಿನ ಕಾರ್ಯದರ್ಶಿ ಡಾ.ನ.ವಜ್ರಕುಮಾರ ಶ್ರಮದಿಂದ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡುವಂತಾಗಿದೆ. ಕಾಲೇಜು ಇನ್ನೂ ಎತ್ತರಕ್ಕೆ ಬೆಳೆಯಲು ಅಧ್ಯಾಪಕರು, ಸಿಬ್ಬಂದಿ, ಸಹಕಾರ ಅಗತ್ಯ ಎಂದರು.

ಪ್ರಾಚಾರ್ಯ ಡಾ.ರಮೇಶ ಚಕ್ರಸಾಲಿ ಮಾತನಾಡಿದರು. ಪ್ರೊ. ವಾಸುದೇವ ಪರ್ವತಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು.