ಜಿಲ್ಲೆ

ಸೈನಿಕ ಶಾಲೆ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ

ವಿಜಯವಾಣಿ ಸುದ್ದಿಜಾಲ ಧಾರವಾಡ

ಸೈನಿಕ ಶಾಲೆ ಪ್ರವೇಶ ಪರೀಕ್ಷೆಯಲ್ಲಿ ನಗರದ ಎಕ್ಸಲೆಂಟ್ ಕೋಚಿಂಗ್ ಕ್ಲಾಸಿಸ್‌ನ ವಿದ್ಯಾರ್ಥಿ ಚಿರಂಜೀವಿ ಬಿ.ಜೆ. 300 ಅಂಕಗಳಿಗೆ 288 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ, ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ಅಖಿಲ ಭಾರತ ಮಟ್ಟದಲ್ಲಿ 151ನೇ ರ‍್ಯಾಂಕ್ ಪಡೆದಿದ್ದಾನೆ. ಸಾಧಕ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷ ಬಸವರಾಜ ಕೌಲಗಿ, ಕಾರ್ಯದರ್ಶಿ ಡಾ. ಸತೀಶ ಜಾಧವ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.