ಜಿಲ್ಲೆ

ಮಾಧ್ಯಮಿಕ ಶಾಲಾ ನೌಕರರ ಪ್ರತಿಭಟನೆ ನಾಳೆ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜು. 12ರಂದು ನಗರದಲ್ಲಿ ಬೃಹತ್​ ಪ್ರತಿಭಟನಾ ಮೆರವಣಿಗೆ ಏರ್ಪಡಿಸಲಾಗಿದೆ.
ಮಧ್ಯಾಹ್ನ 1 ಗಂಟೆಗೆ ಕಲಾಭವನ ಮೈದಾನದಿಂದ ಮೆರವಣಿಗೆ ಆರಂಭವಾಗಲಿದ್ದು, ಜುಬಿಲಿ ವೃತ್ತ, ಕೋರ್ಟ್​ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಲಿದ್ದಾರೆ. ನಂತರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಪತ್ರ ರವಾನಿಸಲಿದ್ದಾರೆ.
2006ರ ನಂತರ ನೇಮಕವಾದ ಅನುದಾನಿತ ಹಾಗೂ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿ, 2015ರ ನಂತರ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ತಕ್ಷಣ ಅನುಮತಿ ನೀಡುವುದು, ಹೊರಟ್ಟಿ ಅವರ ವರದಿ (ಕಾಲ್ಪನಿಕ ವೇತನ) ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಆರ್​. ಭಟ್​ ತಿಳಿಸಿದ್ದಾರೆ.