ಜಿಲ್ಲೆ

ಶಿವಮೊಗ್ಗದಲ್ಲಿ ನಾಳೆಯಿಂದ ಶಾಲಾ-ಕಾಲೇಜು ಓಪನ್; ನಿಷೇಧಾಜ್ಞೆ ಮುಂದುವರಿಕೆ

theerthaswamy

ಶಿವಮೊಗ್ಗ: ನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಞೆಯನ್ನು ಮಾರ್ಚ್ 4ರ ವರೆಗೆ ಮುಂದುವರಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ನಾಳೆಯಿಂದ ಶಾಲಾ - ಕಾಲೇಜುಗಳು ಸಹ ಪುನಾರಂಭಗೊಳ್ಳುತ್ತಿವೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಶಿವಮೊಗ್ಗ ನಗರದಲ್ಲಿ ಮುಂದುವರಿಸಲಾಗಿದೆ.

ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಬಳಿಕ ನಗರದಲ್ಲಿ ಬಿಗುವಿನ ವಾತಾವರಣ ಮುಂದುವರಿದಿತ್ತು, ಅಂತಿಮ ಯಾತ್ರೆ ಮೆರವಣಿಗೆ ವೇಳೆ ಉದ್ರಿಕ್ತರ ಗುಂಪು ಬೈಕ್​ಗೆ ಬೆಂಕಿ ಹಚ್ಚಿ, ಕಾರುಗಳ ಗಾಜನ್ನು ಪುಡಿಪುಡಿ ಮಾಡಿದ್ದರು. ಹರ್ಷನ ಹತ್ಯೆ ನಂತರ ನಡೆದ ಗಲಭೆ ಪರಿಣಾಮನವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಅಹಿತಕರ ಘಟನೆ ನಡೆಯದಂತೆ ಅದನ್ನು ಮುಂದುವರಿಸಲಾಗಿದೆ.