ಗಾರ್ಡನ್ ಏರಿಯಾದಲ್ಲಿ ದೋಷಪೂರಿತ ಸೈಲೆನ್ಸರ್‌ಗಳನ್ನು ಜಪ್ತಿ ಮಾಡಲಾಯಿತು. 
ಜಿಲ್ಲೆ

ಗಾರ್ಡನ್ ಏರಿಯಾದಲ್ಲಿ ದೋಷಪೂರಿತ ಸೈಲೆನ್ಸರ್ ಜಪ್ತಿ

ಶಿವಮೊಗ್ಗ: ಬೈಕ್‌ಗಳಲ್ಲಿ ವಾಹನಗಳಲ್ಲಿ ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್‌ಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗಿರುವ ಸಂಚಾರ ಪೊಲೀಸರು, ಸೋಮವಾರ ಗಾರ್ಡನ್ ಏರಿಯಾದ ಕೆಲ ಅಂಗಡಿಗಳ ಮೇಲೆ ದಾಳಿ ನಡೆಸಿ ದೋಷಪೂರಿತ ಸೈಲೆನ್ಸರ್‌ಗಳನ್ನು ಜಪ್ತಿ ಮಾಡಿದರು.

ದೋಷಪೂರಿತ ಸೈಲೆನ್ಸರ್ ಮಾರಾಟ ಮಾಡುವುದು ಹಾಗೂ ಇವುಗಳನ್ನು ದ್ವಿಚಕ್ರ ವಾಹನಗಳಿಗೆ ಅಳವಡಿಸಿಕೊಟ್ಟವರ ವಿರುದ್ದ ಭಾರತೀಯ ಮೋಟಾರು ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ಟ್ರಾಫಿಕ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಡಿವೈಎಸ್ಪಿ ಎಂ.ಸುರೇಶ್, ಸಂಚಾರ ಠಾಣೆ ಇನ್‌ಸ್ಪೆಕ್ಟರ್ ಡಿ.ಕೆ.ಸಂತೋಷ್‌ಕುಮಾರ್ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.