ಜಿಲ್ಲೆ

ಗೂಡ್ಸ್ ಆಟೋದಲ್ಲಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ

ಮೈಸೂರು: ಕಾಳಸಂತೆಯಲ್ಲಿ ಮಾರಾಟ ಮಾಡಲು ಎರಡು ಗೂಡ್ಸ್ ಆಟೋದಲ್ಲಿ ಸಾಗಣೆ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಬಿ.ವಿ.ಕಿರಣ್‌ಕುಮಾರ್ ಅವರು ಶಿರಸ್ತೇದಾರ್ ವಿ.ಆರ್.ಮಹೇಶ್‌ಕುಮಾರ್ ಜತೆ ಸಿದ್ದಲಿಂಗಪುರ ಬಳಿ ದಾಳಿ ನಡೆಸಿದರು. ಈ ವೇಳೆ ಎರಡು ವಾಹನಗಳಲ್ಲಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿರುವುದು ಕಂಡು ಬಂದಿದೆ. ತಿಲಕ್‌ನಗರದ ರವಿಚಂದ್ರ ಸಿಕ್ಕಿ ಬಿದ್ದಿದ್ದು, ಉಳಿದವರು ಪರಾರಿಯಾಗಿದ್ದಾರೆ. ಆದ್ದರಿಂದ ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿ ಕ್ರಮಕೈಗೊಳ್ಳುವಂತೆ ದೂರು ನೀಡಿದ ಹಿನ್ನೆಲೆಯಲ್ಲಿ ಉದಯಗಿರಿಯ ಜಬೀರ್, ತಿಲಕ್‌ನಗರದ ರವಿಚಂದ್ರ ಇತರರು ವಿರುದ್ಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.