ಜಿಲ್ಲೆ

ದಸರಾ ಅಲಂಕಾರ ಸಮಿತಿಗೆ ಆಯ್ಕೆ

ಆದರ್ಶ್. ಎಂ.ಕೆ.

ಮಡಿಕೇರಿ: ೨೦೨೪ನೇ ಸಾಲಿನ ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಡಿಕೇರಿ ನಗರದ ದಸರಾ ಸಮಿತಿ ಕಚೇರಿಯಲ್ಲಿ ನಡೆಯಿತು.


ಅಲಂಕಾರ ಸಮಿತಿಯ ಅಧ್ಯಕ್ಷ ಎಂ.ಎ.ಮುನೀರ್ ಮಾಚರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೌರವ ಸಲಹೆಗಾರರಾಗಿ ಪಿ.ಜಿ.ಮಂಜುನಾಥ್, ಉಪಾಧ್ಯಕ್ಷರಾಗಿ ರವಿಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಜಿ.ಎನ್.ಭರತ್, ಕಾರ್ಯದರ್ಶಿಯಾಗಿ ಲಿಲ್ಲಿಗೌಡ, ಸಹ ಕಾರ್ಯದರ್ಶಿಯಾಗಿ ಜಿ.ಎನ್.ಪುನೀತ್, ಖಜಾಂಜಿ ರಫೀಕ್(ದಾದಾ), ಸಂಘಟನಾ ಕಾರ್ಯದರ್ಶಿ ಹರ್ಷಿತ್ ಕುಮಾರ್ ಅವರುಗಳನ್ನು ಆಯ್ಕೆ ಮಾಡಲಾಯಿತು.