ಹೂವಿನಹಿಪ್ಪರಗಿ: ಹೂವಿನಹಿಪ್ಪರಗಿಯ ಸ್ಥಳೀಯ ವಿಶ್ವಚೇತನ ಕೇಂದ್ರ ಅಡಿಯಲ್ಲಿ ನಡೆಯುತ್ತಿರುವ ವಿಶ್ವಚೇತನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಓದುತ್ತಿದ್ದ ದ್ವೀತಿಯ ಪಿಯುಸಿ ವಿದ್ಯಾರ್ಥಿ ಸಂತೋಷ ಸಂಗಮೇಶ ಹೊರಗಿನಮನಿ ಪದವಿ ಪೂರ್ವ ಕಾಲೇಜುಗಳ ಅ.೨೪, ೨೫ರಂದು ಎಚ್.ಜಿ.ಪದವಿ ಪೂರ್ವ ಕಾಲೇಜು ಸಿಂದಗಿಯಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದ ಪ್ರತಿನಿಽಸಿ ಪ್ರಥಮ ಸ್ಥಾನ ಪಡೆದು ರಾಷ್ಟçಮಟ್ಟದ ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಪ್ರಾಥಮಿಕ, ಪ್ರೌಢಶಾಲಾ, ಕಾಲೇಜಿನ ಪ್ರಾಚಾರ್ಯರು, ಮುಖ್ಯಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.