ಜಿಲ್ಲೆ

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ದತ್ತಾತ್ರೇಯ ಪಿ ಕುಲಕರ್ಣಿ

ಜಮಖಂಡಿ : ಮುಧೋಳದಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಸಿದ್ದಾಪುರ ಪುಷ್ಪಾ ತಾಯಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಬಾಲಕಿಯರ ಥ್ರೋ ಬಾಲ್​ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಯಿತು. ವೈಯಕ್ತಿಕ ವಿಭಾಗದಲ್ಲಿ ಬಸವರಾಜ್​ ಕೋಟಿ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ವಾಣಿ ಮಮದಾಪುರ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ, ಸಾವಿತ್ರಿ ಪುಂಡಿಬೀಜ 110 ಮೀಟರ್​ ಅಡೆತಡೆ ಓಟದಲ್ಲಿ ಪ್ರಥಮ ಸ್ಥಾನ, ಚೈತ್ರ ಹೊಸೂರ್​ ಚಕ್ರ ಎಸೆತ ಪ್ರಥಮ ಸ್ಥಾನ, ಸಚಿನ್​ ತೆಗ್ಗಿ 400 ಮೀಟರ್​ ಅಡೆತಡೆ ಓಟದಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಎಲ್ಲಾ ಕ್ರೀಡಾಪಟುಗಳ ಸಾಧನೆಗೆ ಪ್ರಭುಲಿಂಗೇಶ್ವರ ಶಿಣ ಸಂಸ್ಥೆಯ ಅಧ್ಯ, ಶಾಸಕ, ನಾಡೋಜ ಜಗದೀಶ ಶಿವಯ್ಯ ಗುಡಗುಂಟಿ, ಕಾರ್ಯದರ್ಶಿ ಧರ್ಮಲಿಂಗಯ್ಯ ಗುಡಗುಂಟಿ, ಆಡಳಿತಾಧಿಕಾರಿ ಪ್ರೊ. ವೈ.ಬಿ. ಹೊಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ.

ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದ ಪುಷ್ಪಾ ತಾಯಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಶಾಲಾ ಮಕ್ಕಳು.