ಕುಂದಾಪುರ: ಉಡುಪಿಯಲ್ಲಿ ನಡೆದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದ ಚಕ್ರ ಎಸೆತದಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿ ಸಾಕ್ಷತ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗೀಯ ದಸರಾ ಕ್ರೀಡಾಕೂಟಕ್ಕೆ ಮತ್ತು ಉಡುಪಿ ಜಿಲ್ಲಾ ಅಮೆಚೂರು ಅಥ್ಲೆಟಿಕ್ಸ್ ಅಸೋಸಿಯೇಷನ್ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಚಕ್ರ ಎಸೆತ ಮತ್ತು ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿ ಕಾರ್ತಿಕ್ ಅವರು ದಕ್ಷಿಣಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾಮಟ್ಟದ ವಾನ್ಸೂನ್ ಚೆಸ್ ಟೂರ್ನ್‌ಮೆಂಟ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಶಿವಾನಿ ಅವರು ಉಡುಪಿಯಲ್ಲಿ ನಡೆದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕುಸ್ತಿಯ 75ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗೀಯ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.