ಜಿಲ್ಲೆ

ರಾಜ್ಯ ಮಟ್ಟದ ಕ್ರಾಸ್​ ಕಂಟ್ರಿಗೆ ಆಯ್ಕೆ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಗುಡ್ಡಗಾಡು ಕ್ರಾಸ್​ ಕಂಟ್ರಿ ಓಟದ ಸ್ಪರ್ಧೆಯಲ್ಲಿ ಇಲ್ಲಿನ ಬಾಸೆಲ್​ ಮಿಶನ್​ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನರಸಿಂಹ ಗೋಡಿ ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ನವೆಂಬರ್​ನಲ್ಲಿ ರಾಜ್ಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆ ನಡೆಯಲಿದೆ. ವಿದ್ಯಾರ್ಥಿ ಸಾಧನೆಗೆ ಬಾಸೆಲ್​ ಮಿಶನ್​ ಉಚ್ಚ ಶಿಕ್ಷಣ ಸಂಸ್ಥೆ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಚಾರ್ಯೆ ಸಲೀನಾ ಬೋರ್ಗಾಯಿ, ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.