ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಆಯ್ಕೆ ಪ್ರಕ್ರಿಯೆ ಕುರಿತ ಸಭೆ ಶುಕ್ರವಾರ ನಡೆಯಿತು. 
ಜಿಲ್ಲೆ

ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಆಯ್ಕೆಗೆ ಸಭೆ

ಸೌಮ್ಯ ಆರ್

ಸುಳ್ಯ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತ ಸಭೆ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 3 ವಿದ್ಯಾರ್ಥಿನಿ ನಿಲಯ ಮತ್ತು ಒಂದು ವಿದ್ಯಾರ್ಥಿ ನಿಲಯಕ್ಕೆ ಆಯ್ಕೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು, ಅರಂತೋಡಿನ ವಿದ್ಯಾರ್ಥಿ ನಿಲಯ, ಬಿಸಿಎಂನ ಎಲಿಮಲೆ, ಗುತ್ತಿಗಾರು, ವಿವೇಕಾನಂದ ಸರ್ಕಲ್ ಬಳಿ ಇರುವ ವಿದ್ಯಾರ್ಥಿನಿ ನಿಲಯಕ್ಕೆ ಆಯ್ಕೆ ಸಂಬಂಧಪಟ್ಟು ಚರ್ಚೆ ನಡೆಯಿತು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ತಹಸೀಲ್ದಾರ್ ಮಂಜುನಾಥ್ ಎಂ, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ನಂದಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಾ, ನಿಲಯ ಮೇಲ್ವಿಚಾರಕರಾದ ದೀಪಿಕಾ, ವಿಜಯ ಎಂ.ಪಿ. ಸುಹಾಸಿನಿ ಮತ್ತಿತರರು ಭಾಗವಹಿಸಿದ್ದರು.