ವಿಜಯವಾಣಿ ಸುದ್ದಿಜಾಲ ಧಾರವಾಡ
ಪದವಿ ಪೂರ್ವ ಶಿಕ್ಷಣ ಇಲಾಖೆ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಸವದತ್ತಿ ರಸ್ತೆಯ ಜೆಎಸ್‌ಎಸ್‌ನ ಶ್ರೀ ಮಂಜುನಾಥೇಶ್ವರ ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಜಯಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶ್ರೀದೇವಿ ಪೂಜೇರಿ ಜಿಲ್ಲಾ ಮಟ್ಟದ ತ್ರಿಬಲ್ ಜಂಪನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ಬಾಸ್ಕೆಟ್ ಬಾಲ್ ಮತ್ತು ನೆಟ್ ಬಾಲ್ ಸ್ಪರ್ಧೆಗಳಿಗೆ ಸಹ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸೃಷ್ಟಿ ಮುತಾಲಿಕಸರದೇಸಾಯಿ ಜಿಲ್ಲಾ ಮಟ್ಟದ ಟೇಕ್ವೋಂಡೊದಲ್ಲಿ ಪ್ರಥಮ, ಮಿಥುನ ಚವ್ಹಾನ ಕರಾಟೆಯಲ್ಲಿ ದ್ವಿತೀಯ ಹಾಗೂ ನಮ್ರತಾ ಚವ್ಹಾಣ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಜೆಎಸ್‌ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ, ಡಾ. ಸೂರಜ್ ಜೈನ್, ಮಹಾವೀರ ಉಪಾಧ್ಯೆ, ಜಿನಪ್ಪ ಕುಂದಗೋಳ, ಕಾಲೇಜಿನ ಪ್ರಾಚಾರ್ಯ ಡಾ. ಬಿ.ಎನ್ ಭಾವಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ತೋಟಗೇರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.