ಮಂಡ್ಯ: ತಾಲೂಕಿನ ಎ.ಹುಲ್ಲುಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ನಿಸರ್ಗ ಮತ್ತು ಕೀರ್ತಿ ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯಮಟ್ಟದ ಟೂರ್ನಿಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ.25ರಿಂದ ಛತ್ತಿಸ್‌ಗಡ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಅದೇ ರೀತಿ ನಿಸರ್ಗ ಜಿಲ್ಲಾಮಟ್ಟದ 600 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮುಖ್ಯಶಿಕ್ಷಕ ವೈ.ಸಿ.ಅನಂದಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ಎಂ.ಜಯರಾಮಪ್ಪ, ಸಹ ಶಿಕ್ಷಕರಾದ ಆರ್.ಜಯರಾಮು, ಕುಸುಮಾ, ಸುಧಾ, ಸಿದ್ದರಾಜು, ಕೃಷ್ಣಮೂರ್ತಿ, ಜಯಕುಮಾರ್ ಹಾಗೂ ಎಸ್‌ಡಿಎಂಸಿ ಆಡಳಿತ ಮಂಡಳಿ ಅಭಿನಂದಿಸಿದೆ.