ಕಡಬ: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ, ಇಂದ್ರಪ್ರಸ್ಥ ವಿದ್ಯಾಸಂಸ್ಥೆಗಳು ಉಪ್ಪಿನಂಗಡಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ನಿಶ್ವಿತ್ ಪಿ.ಪ್ರಥಮ ಸ್ಥಾನ, 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕೀರ್ತಿ ಜೆ.ರೈ ಪ್ರಥಮ ಸ್ಥಾನವನ್ನು ಪಡೆದು, ಬೆಂಗಳೂರಿನಲ್ಲಿ ನಡೆಯುವ ಪ್ರಾಂತೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಡ್ಯಾಲಿ, 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಪವನ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಅವರಿಗೆ ಕರಾಟೆ ಶಿಕ್ಷಕ ಯಾದವ ಬೀರಂತಡ್ಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮೀಶ ಗೌಡ ಆರಿಗ ತರಬೇತಿ ನೀಡಿದ್ದಾರೆ.