ಜಿಲ್ಲೆ

ರಾಜ್ಯಮಟ್ಟದ ಪುಟ್ಬಾಲ್ ಕ್ರೀಡಾಕೂಟಕ್ಕೆ ಆಯ್ಕೆ

ಬಸವರಾಜ ವೀರಪ್ಪ ಗರಗ

ಹಳಿಯಾಳ: ವಿಜಯಪುರದ ಸೈನಿಕ ಶಾಲಾ ಮೈದಾನದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಫುಟ್ಬಾಲ್ ಪಂದ್ಯಾವಳಿಯ ಕ್ರೀಡಾಕೂಟದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಹಳಿಯಾಳ ತಾಲೂಕಿನ ಜನಗಾ ಗ್ರಾಮದ ಸರ್ಕಾರಿ ಪ್ರೌಢಶಾಲೆ 17 ವಯೋಮಿತಿ ಒಳಗಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟದ ಪುಟ್ಬಾಲ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ದೈಹಿಕ ಶಿಕ್ಷಕ ಹಾಗೂ ಫುಟ್ಬಾಲ್ ತರಬೇತಿದಾರ ವಿನಾಯಕ ಪೂಜಾರಿಯವರು ವಿದ್ಯಾರ್ಥಿನಿಯರು ಬೆಂಗಳೂರಿನ ವಿದ್ಯಾನಗರದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಉತ್ತರ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಬಾಲಕಿಯರ ತಂಡದ ಮೇಲ್ವಿಚಾರಕರಾಗಿ ಅಶ್ವಿನಿ ಗುತ್ತಲ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.