ಸೋಮವಾರಪೇಟೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. 
ಜಿಲ್ಲೆ

ಆಟೋ ಚಾಲಕರು, ಮಾಲೀಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಸೋಮವಾರಪೇಟೆ: ಆಟೋ ಚಾಲಕರು ಮತ್ತು ಮಾಲೀಕರ ಸಂದ ವಾರ್ಷಿಕ ಮಹಾಸಭೆ ಅಧ್ಯಕ್ಷ ಎಚ್.ಕೆ.ಗಂಗಾಧರ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಕೊಡವ ಸಮಾಜದಲ್ಲಿ ನಡೆಯಿತು.

ಮುಂದಿನ ಸಾಲಿನ ಅಧ್ಯಕ್ಷರಾಗಿ ಎಚ್.ಆರ್.ಉಮೇಶ್, ಉಪಾಧ್ಯಕ್ಷರಾಗಿ ಎಂ.ವೈ. ಜೀವನ್, ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಶಫಿ, ಸಹ ಕಾರ್ಯದರ್ಶಿಯಾಗಿ ಜೀವನ್ ಖಜಾಂಚಿಯಾಗಿ ಶಶಿಕುಮಾರ್ ಆಯ್ಕೆಯಾದರು.

ಸಭೆಯಲ್ಲಿ ಉಪಾಧ್ಯಕ್ಷ ಟಿ.ಎಂ. ಅಬ್ದುಲ್ ಕರೀಂ, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜನಾರ್ದನ್, ಉಪಕಾರ್ಯದರ್ಶಿ ಪಿ.ಎನ್. ರಮೇಶ್, ಖಜಾಂಚಿ ಸುದೀಪ್ ಆಲ್ಬರ್ಟ್ ಇತರರಿದ್ದರು.

.