ಚಿಕ್ಕಮಗಳೂರು ತಾಲೂಕು ಅರಳಗುಪ್ಪೆ ಕೈಮರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಉಪಾಧ್ಯಕ್ಷರಾದ ಈಶ್ವರೇಗೌಡ ಅವರನ್ನು ಅಭಿನಂದಿಸಲಾಯಿತು. ಟಿ.ರಾಜಶೇಖರ್, ಚಂದ್ರೇಗೌಡ, ಜಯಕುಮಾರ್ ಮತ್ತಿತರರಿದ್ದರು. 
ಜಿಲ್ಲೆ

ಕೈಮರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಚಿಕ್ಕಮಗಳೂರು: ಅರಳಗುಪ್ಪೆ ಕೈಮರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿರುವುದಕ್ಕೆ ಚ್ಯುತಿ ಬಾರದಂತೆ ಸಂಘವನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಸಂಘದ ನೂತನÀ ಅಧ್ಯಕ್ಷ ಎಂ.ಬಿ ಸತೀಶ್ ತಿಳಿಸಿದರು.

ನಗರದ ಸಂಘದ ಕಚೇರಿಯಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಸಂಘದ ಆಡಳಿತ ಮಂಡಳಿಯ ಸದಸ್ಯರುಗಳು ಹಾಗೂ ನಿರ್ದೇಶಕರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವುದಾಗಿ ಹೇಳಿದರು.
ರೈತರಿಗೆ ಸಾಲ ವಿತರಣೆ, ಸ್ತಿçÃಶಕ್ತಿ ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ಸೇರಿದಂತೆ ಹಲವು ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು.
ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಟಿ.ರಾಜಶೇಖರ್ ಮಾತನಾಡಿ, ರೈತರಿಗೆ ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ಸಹಕಾರ ಆಗುವ ರೀತಿಯಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಕೊಡದೆ ಹಿರಿಯರು ಸ್ಥಾಪಿಸಿರುವ ಈ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಒಳ್ಳೆಯ ಹೆಸರು ಬರುವಂತೆ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಕರ್ತವ್ಯ ನಿರ್ವಹಿಸಿ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ನೂತನ ಉಪಾಧ್ಯಕ್ಷ ಎಚ್.ಎಸ್ ಈಶ್ವರೇಗೌಡ, ನಿರ್ದೇಶಕರಾದ ಎಚ್.ಟಿ ಚಂದ್ರೇಗೌಡ, ಕೆ.ಎಸ್ ಜಯಕುಮಾರ್, ಡಿ.ಎಂ.ಶಿವಕುಮಾರ್, ಟಿ.ಕೆ.ರಾಘವೇಂದ್ರ, ಜೆ.ಡಿ.ಲೋಕೇಶ್, ವಿ.ಸಿ ವಿನೋದ್‌ಕುಮಾರ್, ಹೊನ್ನಪ್ಪಶೆಟ್ಟಿ, ಎಂ.ಎಸ್ ಶಾಂಭವಿ, ಶೃತಿ ಕೌಶಿಕ್, ಎ.ಸಿ.ಹಿರಿಯಣ್ಣ, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಕೆ.ಆರ್ ರಘು, ಮುಖ್ಯ ಕಾರ್ಯನಿರ್ವಾಹಕರಾದ ಬಿ.ಎಂ.ಗಿರೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ಶಿವಕುಮಾರ್, ಮಾಜಿ ಗ್ರಾಪಂ ಅಧ್ಯಕ್ಷ ದೀಪಕ್ ಉಪಸ್ಥಿತರಿದ್ದರು.