ಜಿಲ್ಲೆ

ಕೌಶಲ ತರಬೇತಿಗೆ ವಿದ್ಯಾರ್ಥಿಗಳ ಆಯ್ಕೆ

ಮೈಸೂರು: ದಕ್ಷ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಇತ್ತೀಚೆಗೆ ಪ್ರಾಯೋಗಿಕ ಕೌಶಲ ತರಬೇತಿ ಕಲ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿದ್ಯಾರ್ಥಿಗಳಿಗೆ ಕಲಿಕೆಯ ಅವಧಿಯಲ್ಲಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳುವುದರೊಂದಿಗೆ ಉದ್ಯೋಗದ ಅವಕಾಶಗಳನ್ನು ಪರಿಚಯ ಮಾಡಿಸಿಕೊಡುವುದು ಕಾರ್ಯಕ್ರಮದ ಉದ್ದೇಶವಾಗಿತ್ತು. ಈ ಕಾರ್ಯಕ್ರಮಕ್ಕೆ ನಗರದ ಟೆಕ್ನೋಟಾಸ್ಕ್ ಕಂಪನಿಯು ಕೈಜೋಡಿಸಿದ್ದು, ವಿದ್ಯಾರ್ಥಿಗಳಿಗೆ ಸರಾಗವಾಗಿ ಮಾತನಾಡಲು ಬರುವ ಭಾಷೆಗಳೊಂದಿಗೆ ಅವರು ನಿರ್ವಹಿವಸುವಂತಹ ಕೌಶಲಗಳ ತರಬೇತಿಗೆ ಕಂಪನಿಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿತು. ವಿವಿಧ ಕಾಲೇಜುಗಳ 33 ವಿದ್ಯಾರ್ಥಿಗಳು ಭಾಗವಹಿಸಿದ್ದು, ಅವರಲ್ಲಿ 22 ಮಂದಿ ಆಯ್ಕೆಗೊಂಡಿದ್ದಾರೆ ಎಂದು ದಕ್ಷ ಕಾಲೇಜಿನ ಉನ್ನತ ಶಿಕ್ಷಣ ವಿಭಾಗದ ನಿರ್ದೇಶಕ ಪಿ. ಹರೀಶ್, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಬಿ.ಮಹೇಶ ತಿಳಿಸಿದ್ದಾರೆ.