ಜಿಲ್ಲೆ

ಸಮಾಜದಲ್ಲಿ ಸ್ವಾವಲಂಬಿ ಜೀವನ

ಇಂದಿರಾ ಎನ್ ಕೆ

ಕೋಟ: ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿಗೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.

ಕೋಟ ಲಕ್ಷ್ಮೀ ಸೋಮಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಡಾ.ಕೆ.ವಿದ್ಯಾಕುಮಾರಿ ಅವರಿಗೆ ಸಾಧಕ ಮಹಿಳೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾಲೇಜಿನ ವಾರ್ಷಿಕ ಕಡಲು ಸಂಚಿಕೆ ಬಿಡುಗಡೆಗೊಳಿಸಲಾಯಿತು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚಿನ ಬಸ್ ಸಂಚಾರ ನೀಡಲು ಜಿಲ್ಲಾಧಿಕಾರಿಗೆ ಮನವಿ ನೀಡಲಾಯಿತು.

ಡಾ.ಎಸ್.ರಾಜೇಂದ್ರ ನಾಯಕ ಅಧ್ಯಕ್ಷತೆ ವಹಿಸಿದ್ದರು. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಮೇಶ್ ಆಚಾರ್, ಉಪನ್ಯಾಸಕ ಶಂಕರ್ ನಾಯಕ್ ಉಪಸ್ಥಿತರಿದ್ದರು. ಪ್ರೊ.ಸುನಿತಾ ಸ್ವಾಗತಿಸಿದರು. ಮಮತಾ ನಿರೂಪಿಸಿದರು.