ಮೈಸೂರು: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರತಿಮೆ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸೆಲ್ಫಿ ವಿತ್ ನನ್ನ ರಾಮ ಅಭಿಯಾನ ಆಯೋಜಿಸಲಾಗಿತ್ತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆಯ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಮಾರ್ಗದರ್ಶನದಡಿ ನಡೆದ ಕಾರ್ಯಕ್ರಮದಲ್ಲಿ ಸೆಲ್ಫಿ ವಿತ್ ನನ್ನ ರಾಮ ಅಭಿಯಾನದಲ್ಲಿ ಭಾಗಿಯಾಗಿ ‘ಸ್ಕ್ಯಾನ್ ಕೋಡ್’ ಮಾಡುವುದರೊಂದಿಗೆ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಲಾಯಿತು.
ಕೆ.ಆರ್.ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಸಿದ್ದರಾಜು, ಬಿಜೆಪಿ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷ ಕೌಟಿಲ್ಯ ಆರ್. ರಘು, ಮೈಸೂರು ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಯುವಮೋರ್ಚಾ ಮಾಜಿ ಅಧ್ಯಕ್ಷ ವಿಜಯ್ಕುಮಾರ್, ಮಾಧ್ಯಮ ಸಹ ವಕ್ತಾರರಾದ ವಸಂತ್, ಮೋಹನ್, ವಾಣೀಶ್, ಮುಡಾ ಮಾಜಿ ಸದಸ್ಯೆ ಲಕ್ಷ್ಮೀದೇವಿ, ನಗರಪಾಲಿಕೆ ಮಾಜಿ ಸದಸ್ಯರಾದ ಸತೀಶ್, ರಮೇಶ್, ಮುಖಂಡರಾದ ಜಿ.ಎಂ.ಪಂಚಾಕ್ಷರಿ, ವೆಂಕಟೇಶ್ ಪ್ರಸಾದ್ ಇತರರು ಇದ್ದರು.