ಹಾವೇರಿ: ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಇಂಜಿನಿಯರಿಂಗ್ ವಿದ್ಯಾಥಿರ್ಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ದೇವಗಿರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ನಿವಾಸಿ ಹಾಗೂ ದೇವಗಿರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ವಿದ್ಯಾಥಿರ್ ಉಲ್ಲಾಸ ವೀರಪ್ಪ ಉದಲಿ (21) ಮೃತ ದುರ್ದೈವಿ.
ಈತ ಇಂಜಿನಿಯರಿಂಗ್ ಕಾಲೇಜ್ನಲ್ಲಿ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ ವಿಭಾಗದ 4ನೇ ಸೆಮಿಸ್ಟರ್ ಓದುತ್ತಿದ್ದ. ಪರೀೆಯಲ್ಲಿ ಒಂದು ವಿಷಯದಲ್ಲಿ ೇಲ್ ಆಗಿದ್ದರಿಂದ ಮನನೊಂದು ದೇವಗಿರಿ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಕೆರೆಯ ದಡದಲ್ಲಿ ಉಲ್ಲಾಸನ ವಾಚ್ ದೊರೆಯಿತ್ತಿತ್ತು. ಇದರಿಂದಾಗಿ ಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದಾಗ ಉಲ್ಲಾಸನ ಶವ ದೊರೆತಿದೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.