ಜಿಲ್ಲೆ

ಎಲ್ಲರಲ್ಲಿರಲಿ ರಾಣಿ ಅಬ್ಬಕ್ಕನ ನೆನಪು : ಶಕುಂತಳಾ ಶೆಟ್ಟಿ ಆಶಯ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ತುಳುನಾಡ ರಕ್ಷಣೆಗಾಗಿ ಪೋರ್ಚುಗೀಸ್ ವಿರುದ್ಧ ಹೋರಾಡಿದ ಅಬ್ಬಕ್ಕನ ಕುರಿತು ದಾಖಲೆ ಸರಿಯಾಗಿಲ್ಲದಿರುವುದೇ ದುರಂತ. ಅವಳ ನೆನಪು ನಮಗೆಲ್ಲರಿಗೂ ಇರಬೇಕು. ಮಂಗಳೂರು ವಿಮಾನ ನಿಲ್ದಾಣಕ್ಕೆ ರಾಣಿ ಅಬ್ಬಕ್ಕ ಹೆಸರು ಇಡಬೇಕು ಎಂದು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೆ. ಹೆಣ್ಣುಮಕ್ಕಳು ಅಬ್ಬಕ್ಕರಾಗಬೇಕು ಎಂದು ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಳಾ ಟಿ.ಶೆಟ್ಟಿ ಹೇಳಿದರು. ಬಿ.ಸಿ.ರೋಡಿನಲ್ಲಿ ಶುಕ್ರವಾರ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ತುಳು ಬದುಕು ವಸ್ತು ಸಂಗ್ರಹಾಲಯ ವತಿಯಿಂದ ರಾಣಿ ಅಬ್ಬಕ್ಕ ಬಹುಮುಖಿ ಚಿಂತನೆ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ಇತಿಹಾಸ ಸಂಶೋಧಕ ಡಾ.ಪುಂಡಿಕಾ ಗಣಪಯ್ಯ ಭಟ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿದರು. ಬೆಳಗಿನ ಅವಧಿಯಲ್ಲಿ ಉಳ್ಳಾಲದ ಅಬ್ಬಕ್ಕ ರಾಣಿಯರು ಐತಿಹಾಸಿಕ ನೆಲೆ ಕುರಿತು ಸಂಶೋಧಕಿ ಡಾ.ಮಾಲತಿ ಕೃಷ್ಣಮೂರ್ತಿ ಬೆಳಕು ಚೆಲ್ಲಿದರು. ಕಾದಂಬರಿಗಳಲ್ಲಿ ಅಬ್ಬಕ್ಕ ವಿಚಾರದಲ್ಲಿ ಡಾ.ವಿ.ಕೆ.ಯಾದವ ವಿಚಾರ ಮಂಡಿಸಿದರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ ಸಂಸ್ಥಾಪಕ ಡಾ.ತುಕಾರಾಮ ಪೂಜಾರಿ ಪ್ರಾಸ್ತಾವಿಕ ಮಾತನಾಡಿದರು. ಜಯಶ್ರೀ ಪ್ರತಿಮ್ ಕುಮಾರ್ ಪ್ರಾರ್ಥಿಸಿದರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಕಾರ್ಯದರ್ಶಿ ಡಾ.ಆಶಾಲತಾ ಸುವರ್ಣ ವಂದಿಸಿದರು. ಸಿಂಧೂರ ಟಿ.ಪಿ. ಕಾರ್ಯಕ್ರಮ ನಿರ್ವಹಿಸಿದರು.

ಒಂದು ವೇಳೆ ಇಟಾಲಿಯನ್ ಪ್ರವಾಸಿ ಪಿಯತ್ತೊ ದೆಲ್ಲಾ ವೆಲ್ಲೆ ಅಬ್ಬಕ್ಕ ಕುರಿತು ಬರೆಯದೇ ಇದ್ದರೆ ಹಾಗೂ ಪೋರ್ಚುಗೀಸ್ ಆಕರಗಳಿಂದ ಅಬ್ಬಕ್ಕ ಕುರಿತು ಹೆಚ್ಚಿನ ಮಾಹಿತಿ ದೊರೆಯದೇ ಇದ್ದರೆ, ನಮಗೆ ಅವಳ ಬಗ್ಗೆ ತಿಳಿಯಲೂ ಸಾಧ್ಯವಿರಲಿಲ್ಲ. ವಿದೇಶಿ ಆಧಾರಗಳನ್ನು ಅವಲಂಬಿಸಿಯೇ ಅಬ್ಬಕ್ಕನ ಅಧ್ಯಯನ ಮಾಡಬೇಕಾಗುತ್ತದೆ. ಅಬ್ಬಕ್ಕನ ಬಗ್ಗೆ ಸಮಗ್ರ ಮಾಹಿತಿಯನ್ನು ನಾವು ಹೊಂದಿರದಿರುವುದು ಐತಿಹಾಸಿಕ ದುರಂತ. ಉಳ್ಳಾಲದಲ್ಲಿ ನೂರು ವರ್ಷಗಳ ಅವಧಿಯಲ್ಲಿ ಇಬ್ಬರು ಅಬ್ಬಕ್ಕ ರಾಣಿಯರು ತುಳುನಾಡಿನ ಸ್ವಾತಂತ್ರೃಕ್ಕಾಗಿ ಹೋರಾಡಿದ್ದರು. ಡಾ.ಪುಂಡಿಕಾ ಗಣಪಯ್ಯ ಭಟ್ ಇತಿಹಾಸ ಸಂಶೋಧಕ ಮಂಗಳೂರಿನಲ್ಲಿ ಕರಾವಳಿ ಉತ್ಸವ ಮೈದಾನಕ್ಕೆ ಅಬ್ಬಕ್ಕ ರಾಣಿ ಮೈದಾನ ಎಂದು ಹೆಸರಿಡಲು ಮನಪಾ ಮತ್ತು ರಾಜ್ಯ ಸರ್ಕಾರ ಪ್ರಯತ್ನಿಸಬೇಕು. ಅಕಾಡೆಮಿಕ್ ಚಟುವಟಿಕೆ ಕುರಿತು ತುಳು ಸಾಹಿತ್ಯ ಅಕಾಡೆಮಿ ಪ್ರಥಮ ಪ್ರಾಶಸ್ತ್ಯ ನೀಡುತ್ತದೆ. ಆಟಿದ ಕೂಟ ಕುರಿತು ಅಕಾಡೆಮಿ ಸ್ಪಷ್ಟ ನಿಲುವು ಹೊಂದಿದೆ. ಕಂಡದ ಗೊಬ್ಬು ಮಾಡುವವರು ಹಡೀಲು ಬಿದ್ದ ಗದ್ದೆಯಲ್ಲಿ ಬೆಳೆ ಬೆಳೆದರೆ ಅದೇ ದೊಡ್ಡ ಕೊಡುಗೆ. ತಾರಾನಾಥ ಗಟ್ಟಿ ಕಾಪಿಕಾಡ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ https://www.vijayavani.net/prathibhatane-3 https://www.vijayavani.net/pressmeet-54