ಜಿಲ್ಲೆ

ಜಿಲ್ಲೆಯ ಅಧಿಕಾರಿಗಳ ಜನಪರ ಕಾಳಜಿ ಶ್ಲಾಘನೀಯ

ಗೋಪಾಲಕೃಷ್ಣ ಪಾದೂರ್

ಉಡುಪಿ: ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳ ಜನಪರ ಕಾಳಜಿ ಶ್ಲಾನೀಯವಾಗಿದ್ದು, ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಿದ ಲವಾಗಿ ಎಸ್​ ಎಸ್​ಎಲ್​ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಲಿತಾಂಶ ಪಡೆಯಲು ಸಾಧ್ಯವಾಗಿದೆ ಎಂದು ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹೇಳಿದರು.

ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಸಿಬ್ಬಂದಿ ಕೊರತೆ ಮಧ್ಯೆಯೂ ಜಿಪಂ ಅತ್ಯುತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಮುಖ್ಯವಾಗಿ ಜಿಲ್ಲೆಯಲ್ಲಿ ಮರಳು ಮತ್ತು ಗಣಿ ಸಮಸ್ಯೆಯನ್ನು ಪೊಲೀಸ್​ ಇಲಾಖೆಯ ಸಹಾಯದೊಂದಿಗೆ ಬಗೆಹರಿಸಲು ಸಾದ್ಯವಾಗಿದೆ. ಕಾನೂನು ಸುವ್ಯವಸ್ಥೆ ಗಟ್ಟಿಗೊಳಿಸಿದ ಪರಿಣಾಮ ಉಡುಪಿ ಜಿಲ್ಲೆಯನ್ನು ಕೋಮು ಸೂಕ್ಷ$್ಮ ಪಟ್ಟಿಯಿಂದ ತೆಗೆಯಲಾಗಿದೆ ಎಂದು ಹೇಳಿದರು.

ನೂತನ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಮಾತನಾಡಿ, ಸರ್ಕಾರಿ ನೌಕರರಿಗೆ ಕಾರ್ಯಗಳ ಬಗ್ಗೆ ಬದ್ಧತೆ ಅಗತ್ಯವಾಗಿದೆ. ನಾವೆಲ್ಲರೂ ಸರ್ಕಾರವನ್ನು ಪ್ರತಿನಿಧಿಸುವುದರಿಂದ ಜನರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಜವಾಬ್ದಾರಿಯಾಗಿದೆ. ಕಾನೂನಿನ ಪಾಲನೆ ಜೊತೆಗೆ ಮಾನವೀಯ ಮೌಲ್ಯಗಳೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದರು. ಜಿಪಂ ಸಿಇಒ ಪ್ರತಿಕ್​ ಬಾಯಲ್​, ಎಡಿಸಿ ಅಬೀದ್​ ಗದ್ಯಾಳ, ಎಎಸ್ಪಿ ಹರ್ಷ ಪ್ರಿಯಂವದಾ, ಎಸಿ ರಶ್ಮಿ, ಡಿಎ್​ಒ ಗಣಪತಿ ಮೊದಲಾದವರು ಉಪಸ್ಥಿತರಿದ್ದರು.