ಹರಪನಹಳ್ಳಿಯಲ್ಲಿ ಉಪತಹಸೀಲ್ದಾರ್ ನಟರಾಜ್‌ಗೆ ಎಸ್‌ಎಫ್‌ಐ ತಾಲೂಕು ಸಮಿತಿ ಮನವಿ ಸಲ್ಲಿಸಿತು. ಎಸ್‌ಎಫ್‌ಐ ಜಿಲ್ಲಾ ಸಹಕಾರ್ಯದರ್ಶಿ ಎಲ್.ಸಂಜುನಾಯ್ಕ, ಪ್ರಮುಖರಾದ ರಾಹುಲ್, ಕಿಶೋರ್, ಕಿರಣ್, ಅಭಿ, ಚಂದ್ರಕಾಂತ್, ಸುನೀಲ್, ವಿಜಯಲಕ್ಷ್ಮೀ, ಶಶಿಕಲಾ, ಅಮೂಲ್ಯ, ಸಿಂಚನ ಇತರರಿದ್ದರು. 
ಜಿಲ್ಲೆ

ಎಸ್‌ಇಪಿ ಇದ್ದರೂ ಸಿಗದ ಅಂಕಪಟ್ಟಿ

Kopala - Desk - Eraveni

ಹರಪನಹಳ್ಳಿ: ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಿಸಬೇಕೆಂದು ಒತ್ತಾಯಿಸಿ ಎಸ್‌ಎಫ್‌ಐ ತಾಲೂಕು ಸಮಿತಿ ಗುರುವಾರ ಐಬಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಉಪತಹಸೀಲ್ದಾರ್ ನಟರಾಜ್‌ಗೆ ಮನವಿ ಸಲ್ಲಿಸಿತು.

ಎಸ್‌ಎಫ್‌ಐ ಜಿಲ್ಲಾ ಸಹಕಾರ್ಯದರ್ಶಿ ಎಲ್.ಸಂಜುನಾಯ್ಕ ಮಾತನಾಡಿ, ರಾಜ್ಯದಲ್ಲಿ ಎನ್‌ಇಪಿ ಜಾರಿಯಾದ ನಂತರ 22ಕ್ಕೂ ಹೆಚ್ಚು ವಿವಿಗಳು 50ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಿಸಿಲ್ಲ.

ರಾಜ್ಯ ಸರ್ಕಾರ ಎನ್‌ಇಪಿ ರದ್ದುಗೊಳಿಸಿ ಎಸ್‌ಇಪಿ ಜಾರಿಗೊಳಿಸಿದೆ. ಆದರೂ, ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಸಿಗುತ್ತಿಲ್ಲ. ವಿದ್ಯಾರ್ಥಿಗಳು ಕೇಳಿದರೆ ತಾಂತ್ರಿಕ ಸಮಸ್ಯೆ ಎನ್ನುತ್ತಿದ್ದಾರೆ. ಇದರಿಂದ ಉನ್ನತ ಶಿಕ್ಷಣ ಹಾಗೂ ವಿದ್ಯಾರ್ಥಿ ವೇತನ, ಹಾಸ್ಟೆಲ್‌ಗಳಿಗೆ ಅರ್ಜಿ ಸಲ್ಲಿಸಲು ತೊಂದರೆಯಾಗಿದೆ.

ರಾಜ್ಯಪಾಲರು ಎಲ್ಲ ವಿವಿಗಳು ಮುದ್ರಿತ ಅಂಕಪಟ್ಟಿ ವಿತರಿಸಬೇಕು ಎಂದು ಆದೇಶ ನೀಡಿದ್ದರೂ ಪಾಲಿಸುತ್ತಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಅಂಕಪಟ್ಟಿ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.