ಸರಣಿ ಅಪಘಾತ  
ಜಿಲ್ಲೆ

8ಕ್ಕೂ ಹೆಚ್ಚು ಕಾರುಗಳು ಜಖಂ

ದೇವನಹಳ್ಳಿ: ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾದಹಳ್ಳಿ ಗೇಟ್ ಬಳಿಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿ, 8ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಅಪಘಾತದಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಿಕ್ಕಜಾಲ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.