ಜಿಲ್ಲೆ

ಸೇವೆ ಭಾರತೀಯ ಜನತಾ ಪಕ್ಷದ ಉಸಿರು

ಸಕಲೇಶಪುರ : ಸೇವೆ ಎಂಬುದು ಭಾರತೀಯ ಜನತಾ ಪಕ್ಷದ ಉಸಿರಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಬಿಜೆಪಿ ಯುವ ಮೋರ್ಚಾ ಸಕಲೇಶಪುರ ಮಂಡಲದ ವತಿಯಿಂದ ಸೇವಾ ಪಾಕ್ಷಿಕ ಹಾಗೂ ಗಾಂಧಿ ಜಯಂತಿ ಹಾಗೂ ಲಾಲಾ ಬಹಾದೂರ್ ಶಾಸ್ತ್ರಿ ಜಯಂತಿ ಹಿನ್ನೆಲೆಯಲ್ಲಿ ಪಟ್ಟಣದ ಸುಭಾಷ್ ಮೈದಾನದಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ಈಗಾಗಲೇ ಬಿಜೆಪಿ ಮಂಡಲ ಹಾಗೂ ಲಯನ್ಸ್ ಸೇವಾ ಸಂಸ್ಥೆ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆದಿದೆ. ನಗರವನ್ನು ಸ್ವಚ್ಛವಾಗಿಡುವುದೆ ನಮ್ಮ ಮುಖ್ಯ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡಲು ಹಂತ ಹಂತವಾಗಿ ಯೋಜನೆ ರೂಪಿಸಲಾಗುವುದು ಎಂದರು.


ಸುಮಾರು 10ಕ್ಕೂ ಹೆಚ್ಚು ಚೀಲಗಳಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಆಯ್ದು ಮೈದಾನವನ್ನು ಸ್ವಚ್ಛಗೊಳಿಸಲಾಯಿತು. ಇದೇ ವೇಳೆ ಶಾಸಕರು ಬಾಣಂತಿಯರಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.


ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ಮಂಡಲ ಅಧ್ಯಕ್ಷ ವಳಲಹಳ್ಳಿ ಅಶ್ವತ್ಥ್, ಯುವ ಮೋರ್ಚಾ ಅಧ್ಯಕ್ಷ ಹಲಸುಲಿಗೆ ನಿಖಿಲ್, ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಬಬಿತಾ ವಿಶ್ವನಾಥ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಧು ಬೊಮ್ಮನಕೆರೆ ಅಗ್ನಿ ಸೋಮಶೇಖರ್, ನಗರ ಅಧ್ಯಕ್ಷ ಲೋಕೇಶ್, ಕಾರ್ಯದರ್ಶಿ ಸುಧೀಶ್, ನಿಕಟ ಪೂರ್ವ ಅಧ್ಯಕ್ಷ ಮಂಜುನಾಥ್ ಸಂಘಿ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.